ಅನ್ನಸಂತರ್ಪಣೆ ಮೂಲಕ ಕರವೇ ಟಿ.ನಾರಾಯಣ ಗೌಡ್ರು ಹುಟ್ಟು ಹಬ್ಬ ಆಚರಣೆ 

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಆಯೋಜಿಸುವ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ನಾರಾಯಣ ಗೌಡರ ಜನ್ಮ ದಿನಾಚರಣೆಯನ್ನು ಬುಧವಾರ ಆಚರಿಸಲಾಯಿತು.

ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದಲ್ಲಿ ಕರವೇ ಜಿಲ್ಲಾ ಘಟಕದ ವತಿಯಿಂದ ಬೆಳಗ್ಗೆ ವಿಶೇಷ ನೆವರೇರಸಲಾಯಿತು. ಬಳಿಕ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಅನ್ನ ಸಂತರ್ಪಣೆ ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಎಚ್.ಎನ್.ಮಂಜೇಶ್ ಮಾತನಾಡಿ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ನಾರಾಯಣ ಗೌಡ ಅವರು ಕನ್ನಡ ನಾಡು, ನುಡಿ, ಜಲ ಸಂರಕ್ಷಣೆ ಸಂಬಂಧ ಹಲವಾರು ಐತಿಹಾಸಿಕ ಹೋರಾಟಗಳನ್ನು ಮಾಡಿದ್ದಾರೆ. ಕನ್ನಡ ನಾಡು-ನುಡಿಗೆ ಧಕ್ಕೆಯಾದಾಗ ಇಂದಿಗೂ ಕ್ಷಣ ಮಾತ್ರದಲ್ಲಿ ಹೋರಾಟವನ್ನು ರೂಪಿಸುತ್ತಾರೆ. ನಾಡಿಗೆ ಅವರ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದರು.

ಟಿ.ನಾರಾಯಣಗೌಡ ಅವರ ಹುಟ್ಟು ಹಬ್ಬದ ಅಂಗವಾಗಿ ಶ್ರೀ ಚಾಮರಾಜೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಅದಲ್ಲದೇ 700-800 ಜನರಿಗೆ ಅನ್ನಸಂತರ್ಪಣೆ ವ್ಯವಸ್ಥೆಯನ್ನು ಮಾಡುವ ಮೂಲಕ ಅರ್ಥ ಪೂರ್ಣವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅವರಿಗೆ ದೇವರು ಆಯಸ್ಸು, ಆರೋಗ್ಯವನ್ನು ಕರುಣಿಸಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ರಾಜೇಂದ್ರ, ಚಾಮರಾಜನಗರ ತಾಲೂಕು ಅಧ್ಯಕ್ಷ ಸಂತೋಷ್, ಕೊಳ್ಳೇಗಾಲ ತಾಲೂಕು ಅಧ್ಯಕ್ಷ ಮೇಬುಪಾಷ, ಯಳಂದೂರು ತಾಲೂಕು ಅಧ್ಯಕ್ಷ ಮಹದೇವಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಹೇಮಂತ್ ಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಲಕ್ಷ್ಮಿ, ತಾಲೂಕು ಅಧ್ಯಕ್ಷೆ ಸುಮಾ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ರಮೇಶ್ ನಾಯಕ್, ಪದಾಧಿಕಾರಿಗಳಾದ ಅಸದ್, ಇಸ್ಮಾಯಿಲ್, ಮಹೇಶ್ ಮಾದಾಪುರ, ಸುಂದರ್, ಮಹಮ್ಮದ್ ಜಾಬೀರ್, ಅಭಿಷೇಕ್, ನಾಗರಾಜು ನಾಯಕ್, ಚನ್ನ ನಾಯಕ್, ನಂದನ್, ಶಿವು, ಆಕಾಶ್, ಮನೋಜ್, ರಾಜೇಶ್ ಹಾಗೂ ಇತರರು ಉಪಸ್ಥಿತರಿದ್ದರು.

Share this Article
Leave a comment