ಚಾಮರಾಜನಗರ: ಕೊಳ್ಳೇಗಾಲದ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಅಭಿಮಾನಿ ಬಳಗದ ವತಿಯಿಂದ ಬುಧವಾರ ಸನ್ಮಾನಿಸಲಾಯಿತು.
ಕೊಳ್ಳೇಗಾಲದ ಎಂ.ಜಿ.ಎಸ್.ವಿ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಸರ್ಕಾರಿ ಸವಲತ್ತುಗಳ ವಿತರಣೆ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ದಿಲೀಪ್ ಕುದರ್ (ಸಿದ್ದು) ಅವರು ಸನ್ಮಾನಿಸಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕೊಳ್ಳೇಗಾಲದಲ್ಲಿ ಭೇಟಿಯಾದ ಅಭಿಮಾನಿ ಬಳಗದ ಸದಸ್ಯರು ಶಾಲು ಹೊದಿಸಿ, ಫಲಪುಷ್ಪ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಮುಖಂಡ ನಯಾಜ್ ಪಾಷಾ ಹಾಗೂ ಇತರರು ಹಾಜರಿದ್ದರು.