ಚಾಮರಾಜನಗರ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಎ.ಆರ್.ಕೃಷ್ಣಮೂರ್ತಿ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು ಎಂದು ಯುವ ಮುಖಂಡ ಚೇತನ್ ಆಲೂರು ಆಗ್ರಹಿಸಿದ್ದಾರೆ.
ನಗರದಲ್ಲಿ “ಜನತಾ ರಾಯಭಾರಿ” ಮಾಧ್ಯಮದೊಂದಿಗೆ ಅವರು ಮಾತನಾಡಿ, ಮಾಜಿ ರಾಜ್ಯಪಾಲರಾದ ದಿ.ಬಿ.ರಾಚಯ್ಯ ಅವರ ಪುತ್ರರಾಗಿರುವ ಕೃಷ್ಣಮೂರ್ತಿ ಅವರಿಗೆ ರಾಜಕೀಯದಲ್ಲಿ ಅಪಾರವಾದ ಅನುಭವವಿದ್ದು, ಮೂರು ಬಾರಿ ಶಾಸಕರಾಗಿ ಜನಸೇವೆ ಮಾಡಿದ್ದಾರೆ. ಅಲ್ಲದೇ ಕೊಳ್ಳೇಗಾಲ ಕ್ಷೇತ್ರದ ಅಭಿವೃದ್ಧಿಗಾಗಿ ೫೦೦ ಕೋಟಿಗೂ ರೂ, ಹೆಚ್ಚು ಅನುದಾನವನ್ನು ತಂದಿದ್ದಾರೆ. ಮುಂದಿನ ದಿನಗಳಲ್ಲೂ ಕೊಳ್ಳೇಗಾಲ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಎ.ಆರ್.ಕೃಷ್ಣಮೂರ್ತಿ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸ್ಥಳೀಯ ಚುನಾವಣೆಗಳಿಗೆ ಪಕ್ಷ ಸಂಘಟನೆ ಮಾಡಲು ಸ್ಥಳೀಯರಿಗೆ ಆದ್ಯತೆ ನೀಡಬೇಕು. ಎ.ಆರ್.ಕೃಷ್ಣಮೂರ್ತಿ ಅವರಿಗೆ ಸಚಿವ ಸ್ಥಾನವನ್ನು ನೀಡಿದರೇ, ಸ್ಥಳೀಯ ಸಂಸ್ಥೆಗಳಲ್ಲಿ ಹಿಡಿತ ಸಾಧಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಮೂರು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿರುವ ಕೃಷ್ಣಮೂರ್ತಿ ಅವರಿಗೆ ಸಚಿವ ಸ್ಥಾನ ನೀಡಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕು ಎಂದು ಆಗ್ರಹಿಸಿದರು.