ಕಾಂಗ್ರೆಸ್‌ಗೆ ಹೊಸ ಸಾರಥಿ; ಯರಿಯೂರು ಜೆ.ಯೋಗೇಶ್ ನೂತನ ಜಿಲ್ಲಾಧ್ಯಕ್ಷ 

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ, ಸೆ.10: ಸಂಘಟನಾ ಪುನರ್‌ರಚನೆಗೆ ವೇಗ ನೀಡಿರುವ ಕಾಂಗ್ರೆಸ್ ಹೈಕಮಾಂಡ್, ಕರ್ನಾಟಕದ 35 ಜಿಲ್ಲಾ ಕಾಂಗ್ರೆಸ್ ಸಮಿತಿ (DCC) ಅಧ್ಯಕ್ಷರನ್ನು ನೇಮಕ ಮಾಡಿ ಆದೇಶಿಸಿದ್ದು, ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಗೆ ಸಾರಥಿಯನ್ನು ನೇಮಕ ಮಾಡಲಾಗಿದೆ.

ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಉಪ್ಪಾರ ಸಮಾಜದ ಯರಿಯೂರು ಜೆ.ಯೋಗೇಶ್ ಅವರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಬುಧವಾರ ಆದೇಶ ಹೊರಡಿಸಿದೆ.

‘ಸಂಘಟನ್ ಸೃಜನ್ ಅಭಿಯಾನ’ದಡಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಎಐಸಿಸಿ ವೀಕ್ಷಕರು ಪ್ರತಿ ಬ್ಲಾಕ್‌ಗೆ ಭೇಟಿ ನೀಡಿ ಮುಖಂಡರು ಹಾಗೂ ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸಿದ್ದರು. ಈ ವರದಿಗಳ ಆಧಾರದ ಮೇಲೆ ಹೊಸ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ.

ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರಿಂದ ನೇಮಕಾತಿ ಆದೇಶ ಹೊರಬಿದ್ದಿದೆ. ಕಾಂಗ್ರೆಸ್ ಈ ಹಿಂದೆ ವಿವಿಧ ರಾಜ್ಯಗಳಲ್ಲಿ ಇದೇ ‘ಸಂಘಟನ್ ಸೃಜನ್ ಅಭಿಯಾನ’ದಡಿ ವೀಕ್ಷಕರ ವರದಿ ಆಧರಿಸಿ DCC ಅಧ್ಯಕ್ಷರನ್ನು ನೇಮಕ ಮಾಡಿರುವುದು ದಾಖಲಾಗಿದೆ.

ಈ ನೇಮಕಾತಿಗಳೊಂದಿಗೆ ಮುಂಬರುವ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆ ಮೂಡಿದೆ.

ಅಭಿನಂದನೆ ಸಲ್ಲಿಕೆ: ಚಾ.ನಗರ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರಾದ ಯರಿಯೂರು ಜೆ.ಯೋಗೇಶ್ ಅವರಿಗೆ ಅಭಿನಂದನೆಗಳು ಕಾಂಗ್ರೆಸ್ ಮುಖಂಡರು, ಹಿತೈಷಿಗಳು ಶುಭಾಶಯ ಕೋರಿದ್ದಾರೆ. ಜಿಲ್ಲಾ ಉಪ್ಪಾರ ಯುವಕರ ಸಂಘದ ಜಿಲ್ಲಾಧ್ಯಕ್ಷ ಎಂ.ಜಯಕುಮಾರ್ ಹಾಗೂ ಇತರರು ಅಭಿನಂದನೆ ಸಲ್ಲಿಸಿದ್ದಾರೆ.

Share this Article
Leave a comment