ಕಾಂಗ್ರೆಸ್ ಪಕ್ಷಕ್ಕೆ ಬಲತುಂಬಿದ ಉಪಚುನಾವಣೆ ಗೆಲುವು

ಮಣಿಕಂಠ ಜನತಾ ರಾಯಭಾರಿ
1 Min Read

ಮೈಸೂರು: ರಾಜ್ಯದಲ್ಲಿ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯಲ್ಲಿ ಜಯ ಸಾಧಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಬಲ ತುಂಬಿದಂತಾಗಿದೆ.

ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಎರಡೂ ಕಡೆ ಜಯಭೇರಿ ಬಾರಿಸಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ್ 5,708 ಮತಗಳ ಅಂತರದಿಂದ ಹಾಗೂ ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಬಿಜೆಪಿ ಅಭ್ಯರ್ಥಿ ವೀರಭದ್ರಯ್ಯ ಚರಂತಿಮಠ ಅವರನ್ನು 22,332 ಮತಗಳ ಭಾರಿ ಅಂತರದಿಂದ ಸೋಲಿಸಿದ್ದಾರೆ.

ಈ ಜಯವು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಜನ ಮನ್ನಣೆ ಸಿಕ್ಕಿದೆ ಎಂಬುದನ್ನು ಸೂಚಿಸುತ್ತದೆ ಎಂದು ಕಾಂಗ್ರೆಸ್ ನಾಯಕರು ಅಭಿಪ್ರಾಯಪಟ್ಟಿದ್ದಾರೆ. ದಾವಣಗೆರೆಯಲ್ಲಿ ಆರಂಭಿಕ ಹಿನ್ನಡೆಯ ನಂತರ ಸಮರ್ಥ್ ಮಲ್ಲಿಕಾರ್ಜುನ್ ಚೇತರಿಸಿಕೊಂಡು ಗೆಲುವು ಸಾಧಿಸಿದರು. ಒಟ್ಟಾರೆ ಈ ಫಲಿತಾಂಶಗಳು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಮತ್ತಷ್ಟು ಬಲ ತುಂಬಿವೆ.

Share this Article
Leave a comment