ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಟಗರಪುರ ಸಮೀಪ ಕಾರು ಮತ್ತು ಬೈಕ್ ನಡುವೆ ಅಪಘಾತವಾಗಿದ್ದು, ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟಿದ್ದಾರೆ.
ಕೊಳ್ಳೇಗಾಲ ತಾಲೂಕಿನ ಕುಂತೂರು ಮೋಳೆ ಗ್ರಾಮದ ನಿವಾಸಿ ಮಧು ಎಂಬಾತ ಮೃತ ದುರ್ದೈವಿ. ಈತ ಕೊಳ್ಳೇಗಾಲದ ಕಡೆಯಿಂದ ಮೂಗೂರು ಮಾರ್ಗವಾಗಿ ಸಾಗುತ್ತಿದ್ದ ವೇಳೆ ಕಾರಿಗೆ ಡಿಕ್ಕಿಯೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತ ಸ್ಥಳಕ್ಕೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.