ಕುಂದಕೆರೆ ಸುತ್ತಮುತ್ತ ರೈತರಿಗೆ ತಲೆನೋವಾಗಿದ್ದ ಹುಲಿ ಸೆರೆ 

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಕುಂದಕೆರೆ (ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ) ಸುತ್ತಮುತ್ತಲಿನ ಗ್ರಾಮಗಳಲ್ಲಿ ರೈತರಿಗೆ ತಲೆನೋವಾಗಿದ್ದ ಹುಲಿ ಶುಕ್ರವಾರ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ.

ಕುಂದಕೆರೆ ಮತ್ತು ಸುತ್ತಮುತ್ತಲಿನ ಹಳ್ಳಿಗಳಾದ ಕಡಬೂರು, ಮಂಗಳಾ ಮುಂತಾದ ಪ್ರದೇಶಗಳಲ್ಲಿ ಹುಲಿಗಳು ಹಸು ಮತ್ತು ಎತ್ತುಗಳ ಮೇಲೆ ದಾಳಿ ನಡೆಸಿ ಅಪಾರ ನಷ್ಟವನ್ನುಂಟು ಮಾಡಿತ್ತು. ಆಗಾಗ್ಗೆ ಹುಲಿ ಜಮೀನುಗಳಿಗೆ ನುಗ್ಗಿ ಜಾನುವಾರುಗಳನ್ನು ಬಲಿಪಡೆಯುತ್ತಿತ್ತು. ರೈತರು ತಮ್ಮ ಜಾನುವಾರುಗಳನ್ನು ಕಳೆದುಕೊಂಡು ಆತಂಕದಲ್ಲಿ ಜೀವನ ಸಾಗಿಸುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು.

ಅರಣ್ಯ ಇಲಾಖೆಯ ಕಾರ್ಯಾಚರಣೆ: ಇತ್ತೀಚೆಗೆ ಅರಣ್ಯ ಇಲಾಖೆಯು ಸ್ಥಳದಲ್ಲಿ ಬೋನುಗಳನ್ನು ಇರಿಸುವ ಮೂಲಕ ಹುಲಿಯನ್ನು ಸೆರೆಹಿಡಿಯುವ ಕಾರ್ಯಾಚರಣೆಗಳನ್ನು ಕೈಗೊಂಡಿದ್ದರು. ಅದರಂತೆ ಶುಕ್ರವಾರ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಹುಲಿ ಬಂದು ಬಿದ್ದಿದ್ದು, ಕುಂದಕೆರೆ ಸುತ್ತಮುತ್ತಲಿನ ರೈತರು ಹಾಗೂ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ.

Share this Article
Leave a comment