ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತ ಇಬ್ಬರು ಮೃತ, ಹಲವರ ಸ್ಥಿತಿ ಗಂಭೀರ 

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬೈಪಾಸ್ ಬಳಿ ಕೆ.ಎಸ್.ಆರ್.ಟಿ.ಸಿ ಟೈರ್ ಸಿಡಿದು ಅಪಘಾತವಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲ ಮಾರ್ಗವಾಗಿ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಟೈರ್ ಬ್ಲಾಸ್ಟ್ ಆಗಿ ಅಪಘಾತವಾಗಿದ್ದು, ಬಸ್ ನಲ್ಲಿದ್ದ ಸುಮಾರು 60 ಕ್ಕಿಂತಲೂ ಹೆಚ್ಚು ಜನರಿಗೆ ತೀವ್ರವಾದ ಪೆಟ್ಟಾಗಿತ್ತು. ಇದರಲ್ಲಿ 10 ಕ್ಕಿಂತಲೂ ಹೆಚ್ಚು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಇದರಲ್ಲಿ ಕೊಳ್ಳೇಗಾಲದ ಪುಟ್ಟ ನಂಜಮ್ಮ ಮತ್ತು ಕುದೇರು ಗ್ರಾಮದ ನಿವಾಸಿ ಮಹೇಶ್ (50) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಸ್ತುತ ಕೊಳ್ಳೇಗಾಲ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆಯನ್ನು ನೀಡುತ್ತಿದ್ದು, ಹಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಕೊಳ್ಳೇಗಾಲ ಡಿವೈಎಸ್ಪಿ ಜನತಾ ರಾಯಭಾರಿಗೆ ಮಾಹಿತಿ ನೀಡಿದರು.

Share this Article
Leave a comment