ಛಲವಾದಿ ಮಹಾಸಭಾ ಸಂಘಟನೆ ನೂತನ ಪದಾಧಿಕಾರಿಗಳ ನೇಮಕ 

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಛಲವಾದಿ ಮಹಾಸಭಾದ ಜಿಲ್ಲಾ ಮಟ್ಟದ ಸಭೆಯಲ್ಲಿ ವಿವಿಧ ತಾಲೂಕು ಹಾಗೂ ಟೌನ್ ವ್ಯಾಪ್ತಿಯಲ್ಲಿ ನೂತನ ಪದಾಧಿಕಾರಿಗಳನ್ನು ಸೋಮವಾರ ನೇಮಕ ಮಾಡಲಾಯಿತು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಛಲವಾದಿ ಮಹಾಸಭಾದ ವತಿಯಿಂದ ಆಯೋಜಿಸಿದ್ದ ವಾರ್ಷಿಕ ಮಹಾಸಭೆಯಲ್ಲಿ ಛಲವಾದಿ ಮಹಾಸಭಾದ ಟೌನ್ ಅಧ್ಯಕ್ಷರಾಗಿ ಎಂ.ರಮೇಶ್(ಚಾರ್ಲಿ), ಗುಂಡ್ಲುಪೇಟೆ ತಾಲೂಕು ಅಧ್ಯಕ್ಷರಾಗಿ ಕೆ.ಪರಮೇಶ್ವರ್, ಯಳಂದೂರು ತಾಲೂಕು ಅಧ್ಯಕ್ಷರಾಗಿ ಎನ್‌.ಉಮೇಶ್, ಹನೂರು ತಾಲೂಕು ಅಧ್ಯಕ್ಷರಾಗಿ ಬಸವರಾಜು ಅವರನ್ನು ಸರ್ವಾನುಮತದಿಂದ ನೇಮಕ ಮಾಡಲಾಯಿತು.

ಈ ಸಂದರ್ಭದಲ್ಲಿ ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಎನ್.ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಛಲವಾದಿ ಮಹಾಸಭಾವನ್ನು ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಹಲವಾರು ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನೂತನ ಪದಾಧಿಕಾರಿಗಳು ಸಂಘಟನೆಗೆ ಹೆಚ್ಚಿನ ಶಕ್ತಿಯನ್ನು ತುಂಬಬೇಕು ಎಂದರು.

ಜಿಲ್ಲೆಯಲ್ಲಿ ಛಲವಾದಿ ಮಹಾಸಭಾದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಜಿಲ್ಲಾ ಮಟ್ಟದಲ್ಲಿ ಬೃಹತ್ ಸಭೆಯನ್ನು ಆಯೋಜನೆ ಮಾಡಲು ಚಿಂತನೆ ನಡೆಸಲಾಗಿದೆ. ಈ ಮೂಲಕ ಸಮುದಾಯ ಏಳಿಗೆಗೆ ಸಂಘಟನೆಯನ್ನು ಗಟ್ಟಿಗೊಳಿಸಲು ಪ್ರತಿಯೊಬ್ಬ ಸದಸ್ಯರ ಸಹಕಾರ ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಛಲವಾದಿ ಮಹಾಸಭಾದ ಮಾಜಿ ಅಧ್ಯಕ್ಷ ಕೆ.ಆರ್.ನಾರಾಯಣ್, ಟೌನ್ ಉಪಾಧ್ಯಕ್ಷ ಅಶೋಕ್, ಗುತ್ತಿಗೆದಾರರಾದ ಬಸವಣ್ಣ, ಟೌನ್ ಘಟಕದ ಕಾರ್ಯದರ್ಶಿ ಕರಿನಂಜನಪುರ ಪರಮೇಶಿ, ಕೊಡಸೋಗೆ ಪ್ರಸಾದ್, ಮಂಗಲ ರವಿ, ಚಿಕ್ಕಬೆಳ್ಳಯ್ಯ, ಡೊಳ್ಳಿಪುರ ಗುರುಸ್ವಾಮಿ ಹಾಗೂ ಇತರರು ಹಾಜರಿದ್ದರು.

Share this Article
Leave a comment