ತಮಿಳುನಾಡು ಸಿಎಂ ವಿಜಯ್ ವಿರುದ್ಧ ಪ್ರತಿಭಟನೆ

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ : ರಾಜ್ಯದ ಮೇಕೆದಾಟು ಯೋಜನೆಯನ್ನು ವಿರೋಧಿಸಿದ ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರುದ್ಧ ಕನ್ನಡ ಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀ ಭುವನೇಶ್ವರಿ ವತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸೇನಾಪಡೆಯ ರಾಜ್ಯಾಧ್ಯಕ್ಷ ಚಾರಂ.ಶ್ರೀನಿವಾಸಗೌಡ ಮಾತನಾಡಿ, ಕರ್ನಾಟಕ ಸರ್ಕಾರವು ಅಂತರಾಜ್ಯ ಗಡಿ ಭಾಗದಲ್ಲಿ ಅಭಿವೃದ್ಧಿ ಯೋಜನೆ ಕೈಗೊಂಡಾಗೆಲ್ಲ, ತಮಿಳುನಾಡಿನ ಮುಖ್ಯಮಂತ್ರಿಗಳಾಗಿದ್ದ ದಿ. ಕರುಣಾನಿಧಿ, ದಿ. ಜೆ. ಜಯಲಲಿತಾರವರು ವಿರೋಧ ವ್ಯಕ್ತಪಡಿಸುತ್ತಿದ್ದರು. ಈ ಬಗ್ಗೆ ಅಂದಿನಿಂದಲೂ ನಿರಂತರವಾಗಿ ಕರ್ನಾಟಕದಲ್ಲಿ ಹೋರಾಟ ನಡೆಸಲಾಗುತ್ತಿತ್ತು. ಪ್ರಸ್ತುತ ಮೇಕೆದಾಟು ಯೋಜನೆಗೆ ತಮಿಳುನಾಡಿನ ಈಗಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ರವರು ವಿರೋಧ ವ್ಯಕ್ತಪಡಿಸಿರುವುದು ಅತ್ಯಂತ ಖಂಡನೀಯ ಎಂದರು.

ಮೇಕೆದಾಟು ಯೋಜನೆ ಸಂಬಂಧಸುಪ್ರಿಂ ಕೋರ್ಟ್ ನಲ್ಲಿ ರಾಜ್ಯದ ಪರವಾಗಿ ತೀರ್ಪುಬಂದಿದೆ. ಇದನ್ನು ಸಹಿಸಲಾಗದ ತಮಿಳುನಾಡು ಮುಖ್ಯಮಂತ್ರಿ ಜೊಸೆಫ್ ವಿಜಯ್ ರವರು ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಲು ಪ್ರಯತ್ನಿಸಿ ಕರ್ನಾಟಕದ ಮೇಕೆದಾಟು ಯೋಜನೆಗೆ ಅನುಮತಿ ನೀಡಬಾರದೆಂದು ಒತ್ತಾಯಿಸಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ತಿಳಿಸಿದರು.

ಮೇಕೆದಾಟಿನಲ್ಲಿ ಕರ್ನಾಟಕ ಸರ್ಕಾರವು ರೂಪಿಸಿರುವ ಯೋಜನೆಯಿಂದ ಲಕ್ಷಾಂತರ ಹೆಕ್ಟೇರ್ ಕೃಷಿಭೂಮಿಗೆ ನೀರು ಹಾಗೂ ಏಳೆಂಟು ಜಿಲ್ಲೆಗಳಿಗೆ ನದಿ ಮೂಲದಿಂದ ಕುಡಿಯುವ ನೀರು ಹರಿಯಲಿದೆ, ಇದನ್ನು ಅರಿಯದ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ರವರು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವುದು ಸರಿಯಲ್ಲ , ಮೇಕೆದಾಟು ಯೋಜನೆಗೆ ವಿರೋಧ ಮುಂದುವರೆಸಿದರೆ ಹೋರಾಟ ತೀವ್ರ ಸ್ವರೂಪವಾಗಲಿದೆ ಎಂದರು.

ಪ್ರತಿಭಟನೆಯಲ್ಲಿ ಹಿರಿಯ ಕನ್ನಡ ಚಳವಳಿಗಾರ ಶಾ.ಮುರಳಿ, ಚಾ.ವೆಂ.ರಾಜಗೋಪಾಲ್, ರವಿಚಂದ್ರಪ್ರಸಾದ್ , ಮಹೇಶ್ ಗೌಡ, ಮುತ್ತುರಾಜ್, ಸಿದ್ದಶೆಟ್ಟಿ ಸೇರಿದಂತೆ ಹಲವಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Share this Article
Leave a comment