ಚಾಮರಾಜನಗರ, ಅ.24:- ಜಿಲ್ಲೆಯಲ್ಲಿ ನವೆಂಬರ್ 1 ರಂದು ನಡೆಯಲಿರುವ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಕ್ಕಾಗಿ ಕಲೆ, ಸಂಸ್ಕೃತಿ ಭಾಷೆ, ಸಾಹಿತ್ಯ, ಸಂಗೀತ, ನೃತ್ಯ, ರಂಗಭೂಮಿ, ಜಾನಪದ, ಶಿಕ್ಷಣ, ಆರೋಗ್ಯ, ಕ್ರೀಡೆ, ಪತ್ರಿಕೋದ್ಯಮ, ಸಾವಯವ ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾಕೇಂದ್ರದಲ್ಲಿ ನಡೆಯಲಿರುವ 2026-27ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಕರ್ನಾಟಕ ರಾಜ್ಯೋತ್ಸವ ಸನ್ಮಾನ ಆಯ್ಕೆ ಸಮಿತಿಯನ್ನು ರಚಿಸಲಾಗಿದೆ.

ಅರ್ಜಿ ಸಲ್ಲಿಸುವ ಸಾಧಕರು ಚಾಮರಾಜನಗರ ಜಿಲ್ಲೆಯವರಾಗಿರಬೇಕು. ಅರ್ಜಿದಾರರು ಕನಿಷ್ಠ 45 ವರ್ಷಗಳ ವಯೋಮಿತಿ ಹೊಂದಿರಬೇಕು. ಸರ್ಕಾರಿ ನೌಕರರಾಗಿರಬಾರದು. ಸಂಗೀತ, ನೃತ್ಯ, ರಂಗಭೂಮಿ, ಸಾವಯವ ಕೃಷಿ, ಪತ್ರಿಕೋದ್ಯಮ, ದೃಶ್ಯಮಾಧ್ಯಮ, ಜಾನಪದ, ಶಿಕ್ಷಣ, ಸಾಹಿತ್ಯ, ಆರೋಗ್ಯ, ಸಂಘಟನೆ, ಶಾಂತಿ ಮತ್ತು ಮಾನವತೆ, ಸಹಕಾರ, ಕಲೆ, ಭಾಷೆ, ಸಂಸ್ಕøತಿ, ಕ್ರೀಡೆ, ಹಾಗೂ ಇನ್ನಿತರೆ ಸಮಾಜಮುಖಿ, ಸಾಂಸ್ಕøತಿಕ ಸೇರಿದಂತೆ ಯಾವುದಾದರೊಂದು ಕ್ಷೇತ್ರದಲ್ಲಿ ಕನಿಷ್ಠ 10 ವರ್ಷ ಉತ್ತಮ ಸೇವೆ ಸಲ್ಲಿಸಿರಬೇಕು.

ಈ ಹಿಂದೆ ಜಿಲ್ಲಾಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿತರಾಗಿದ್ದಲ್ಲಿ ಮತ್ತೊಮ್ಮೆ ಸನ್ಮಾನಕ್ಕೆ ಅರ್ಹರಾಗುವುದಿಲ್ಲ ಹಾಗೂ ಈ ಹಿಂದೆ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿತರಾಗಿಲ್ಲದಿರುವ ಬಗ್ಗೆ ಸ್ವಯಂ ದೃಢೀಕರಣ ನೀಡಬೇಕು. ನಿಗದಿತ ಮಾನದಂಡಗಳನ್ನು ಪೂರೈಸಿದ ಜಿಲ್ಲೆಯ ಯಾವುದೇ ವ್ಯಕ್ತಿ ತಮ್ಮ ಸಂಪೂರ್ಣ ಸೇವಾ ವಿವರಗಳನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ವರನಟ ಡಾ. ರಾಜ್ಕುಮಾರ್ ಜಿಲ್ಲಾ ರಂಗಮಂದಿರ, ಚಾಮರಾಜನಗರ ಇವರಿಗೆ ಕಡ್ಡಾಯವಾಗಿ ಅಕ್ಟೋಬರ್ 28ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು.

ಜಿಲ್ಲಾಮಟ್ಟದ ಕರ್ನಾಟಕ ರಾಜ್ಯೋತ್ಸವ ಸನ್ಮಾನಕ್ಕಾಗಿ ಅರ್ಹ ವ್ಯಕ್ತಿಗಳನ್ನು ಆಯ್ಕೆ ಮಾಡುವಲ್ಲಿ ಯಾವುದೇ ಸಂಘ ಸಂಸ್ಥೆಗಳ ಶಿಫಾರಸುಗಳನ್ನು ಪರಿಗಣಿಸುವುದಿಲ್ಲ. ಅರ್ಹರ ಆಯ್ಕೆಯಲ್ಲಿ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.