ಪಡಿತರ ಅಕ್ಕಿ ಅಕ್ರಮ ಸಾಗಾಣಿಕೆ ನಿರಂತರ 

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಕಡುಬಡವರಿಗೆ ನೀಡುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುವುದು ಎಗ್ಗಿಲ್ಲದೇ ನಡೆಯುತ್ತಲೇ ಇದೆ.

ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿರುವವರ ಮೇಲೆ ಪೊಲೀಸರು ನಿರಂತರವಾಗಿ ದಾಳಿ ನಡೆಸುತ್ತಿದ್ದರು ಇದಕ್ಕೆ ಕಡಿವಾಣ ಬಿದ್ದಂತೆ ಕಾಣುತ್ತಿಲ್ಲ. ಗುಂಡ್ಲುಪೇಟೆ ಆಹಾರ ಇಲಾಖೆಯ ಶಿರಸ್ತೇದಾರರು ನೀಡಿದ ದೂರಿನ ಮೇರೆಗೆ ಮಂಗಳವಾರ ಬೇಗೂರು ಪೊಲೀಸ್ ಠಾಣೆಯ ಪೊಲೀಸರು ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದವರ ಮೇಲೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಪ್ರಕರಣ ಪಡಿತರ ಅಕ್ಕಿ ಅಕ್ರಮ ಸಾಗಣೆ ಎಗ್ಗಿಲ್ಲದೇ ಸಾಗಿಸುತ್ತಿರುವುದಕ್ಕೆ ಮತ್ತೊಂದು ಉದಾಹರಣೆಯಾಗಿದೆ.

ಗುಂಡ್ಲುಪೇಟೆ ಪಟ್ಟಣದ ಮಹಮ್ಮದ್ ಅಶ್ರರ್ (26) ಬಂಧಿತ ಆರೋಪಿ. ಈತ ಕೋಟೆ ಕೆರೆ ಗ್ರಾಮದ ರಸ್ತೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಪೊಲೀಸರು ದಾಳಿ ನಡೆಸಿ ಬಂಧಿಸಿ, ಸುಮಾರು 26 ಸಾವಿರ ರೂ, ಮೌಲ್ಯದ 5 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

 

Share this Article
Leave a comment