ಪ್ರತಿಭಾವಂತ ಮುಸ್ಲಿಂ ವಿದ್ಯಾರ್ಥಿಗಳಿಗೆ ಸನ್ಮಾನ 

ಮಣಿಕಂಠ ಜನತಾ ರಾಯಭಾರಿ
1 Min Read

ಯಳಂದೂರು: ತಾಲೂಕಿನ ಮಾಂಬಳ್ಳಿ ಗ್ರಾಮದ ಮುಸ್ಲಿಂ ಸಮುದಾಯದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗ್ರಾಮದ ಮುಖಂಡರು ಸನ್ಮಾನಿಸಿದರು.

ಮಾಂಬಳ್ಳಿ ಗ್ರಾಮದ ಮುಸ್ಲಿಂ ಸಮುದಾಯದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಾದ ಅರಬಿನ್ ತಾಜ್ 539 ಅಂಕ, ಬಿಬಿಸುಫೀಯ 535 ಅಂಕ, ಕೇಖಸ ತರನಂ 532 ಅಂಕಗಳನ್ನು ಪಡೆದುಕೊಂಡಿದ್ದರು. ಪಿಯುಸಿಯಲ್ಲಿ ಬಿಬಿಶಫೂರ್ 573, ಮೇರಾಜ್ಸಭಾ 568, ಜೈನಸುಲತನ್ 534, ಶಾಖಿದ್ ಖಾನ್ 514, ಮುಬಾರಕ್ 572, ಮಹಮ್ಮದ್ ಉಮೇರ್ 565 ಅಂಕಗಳನ್ನು ಪಡೆದು ಗ್ರಾಮಕ್ಕೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಕೀರ್ತಿ ತಂದಿರುತ್ತಾರೆ. ಈ ವಿದ್ಯಾರ್ಥಿಗಳಿಗೆ ಮಾಂಬಳ್ಳಿ ಗ್ರಾಮದ ವಿವಿಧ ಸಮುದಾಯದ ಮುಖಂಡರು ಒಡಗೂಡಿ ಸನ್ಮಾನಿಸಿ ಅಭಿನಂದಿಸಿದರು.

ಈ ವೇಳೆ ಗ್ರಾಮದ ಮುಖಂಡರಾದ ಮಾಂಬಳ್ಳಿ ರಾಮಣ್ಣ ರವರು ಮಾತನಾಡಿ, ಮಾಂಬಳ್ಳಿ ಗ್ರಾಮದ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಈ ಬಾರಿಯ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದುಕೊಂಡು ಉತ್ತಮ ಸಾಧನೆ ಮಾಡಿದ್ದಾರೆ. ಇದರಿಂದ ನಮ್ಮ ಗ್ರಾಮಕ್ಕೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಇದು ಹೆಮ್ಮೆಯ ವಿಚಾರವಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾಂಬಳ್ಳಿ ಗ್ರಾಮದ ಮುಖಂಡರಾದ ಶಿವಕುಮಾರ್, ಸುರೇಶ್ ಮದ್ದೂರು, ಸಾದಿರ್ ಪಾಷ, ಸೈಯದ್, ಸಾರ್ಥಜ್, ನೂರುದ್ದಿನ್ ಹಾಗೂ ಇತರರು ಹಾಜರಿದ್ದರು.

Share this Article
Leave a comment