ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಸಹಕಾರಿ- ಎಸ್ಪಿ ಮುತ್ತುರಾಜು 

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಅತ್ಯಂತ ಸಹಕಾರಿಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ‌.ಮುತ್ತುರಾಜು ತಿಳಿಸಿದರು.

ನಗರದ ಡಿಎಆರ್ ಕೇಂದ್ರಸ್ಥಾನ ಆವರಣದ ಪೊಲೀಸ್ ಭವನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಪೊಲೀಸ್ ಕಲ್ಯಾಣ ಕಾರ್ಯಕ್ರಮದಡಿ ಆಯೋಜಿಸಲಾದ “ಆರಕ್ಷಕರ ಮಕ್ಕಳ ಬೇಸಿಗೆ ಶಿಬಿರ–2026”ಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

ಬೇಸಿಗೆ ಶಿಬಿರದಲ್ಲಿ ವಿವಿಧ ಸಾಂಸ್ಕೃತಿಕ, ಕ್ರೀಡಾ ಹಾಗೂ ವ್ಯಕ್ತಿತ್ವ ವಿಕಸನ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳು ಹೆಚ್ಚು ಪ್ರೋತ್ಸಾಹದಾಯಕ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಅವರ ಜ್ಞಾನ ಮತ್ತು ಸಾಮರ್ಥ್ಯ ವೃದ್ಧಿಯಾಗುತ್ತದೆ ಎಂದು ಹೇಳಿದರು.

ಮಕ್ಕಳು ಪ್ರತಿಯೊಂದು ಕ್ಷೇತ್ರದಲ್ಲೂ ಆಸಕ್ತಿ ವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು. ಶಿಬಿರಗಳು ಮಕ್ಕಳ ಆತ್ಮವಿಶ್ವಾಸ ಮತ್ತು ಕೌಶಲ್ಯ ಅಭಿವೃದ್ಧಿಗೆ ಸಹಕಾರಿಯಾಗುತ್ತವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಎಂ.ಎನ್. ಶಶಿಧರ್, ಡಿವೈಎಸ್ಪಿ ಸೋಮಣ್ಣ, ಕಲಾವಿದರಾದ ಕಿರಣ್ ಗಿರ್ಗಿ ಹಾಗೂ ಇತರರು ಉಪಸ್ಥಿತರಿದ್ದರು.

Share this Article
Leave a comment