ಬಡ ಪೌರಕಾರ್ಮಿಕರ ಮಗ ಈಗ ಆಯೋಗದ ಸದಸ್ಯ

ಮಣಿಕಂಠ ಜನತಾ ರಾಯಭಾರಿ
1 Min Read

ಬೆಂಗಳೂರು: ಸಾಧನೆ ಯಾರ ಅಪ್ಪನ ಮನೆಯ ಸ್ವತ್ತಲ್ಲ ಎಂಬುವುದಕ್ಕೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದವರ ಮಗನೊಬ್ಬನು ಈಗ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾಗಿ ನೇಮಕವಾಗಿದ್ದಾರೆ.

ಹೌದು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾಗಿ ಚಾಮರಾಜನಗರದ ಕವಿ, ಸಾಹಿತಿ ಶಂಕರ ಸಿ.ಅಂಕನಶೆಟ್ಟಿಪುರ ಅವರು ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಬೆಂಗಳೂರಿನ ಸಫಾಯಿ ಕರ್ಮಚಾರಿಗಳ ಆಯೋಗದ ಕಚೇರಿಯಲ್ಲಿ ಮಾಜಿ ಮೇಯರ್ ನಾರಾಯಣ ಅವರ ನೇತೃತ್ವದಲ್ಲಿ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾಗಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಆಯೋಗದ ಅಧಿಕಾರಿಗಳ ಜೊತೆ ಮೊದಲ ಸಭೆಯನ್ನು ನಡೆಸುವ ಮೂಲಕ ಗಮನಸೆಳೆದರು.

ಈ ಸಂದರ್ಭದಲ್ಲಿ ಸಂಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಶಂಕರ ಸಿ.ಅಂಕನಶೆಟ್ಟಿಪುರ ಅವರು “ಜನತಾ ರಾಯಭಾರಿ” ಯೊಂದಿಗೆ ಮಾತನಾಡಿ, ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯನಾಗಿರುವುದಕ್ಕೆ ಸಂತಸವಾಗುತ್ತಿದೆ. ರಾಜ್ಯದಲ್ಲಿ ಪೌರಕಾರ್ಮಿಕ ಜ್ವಲಂತ ಸಮಸ್ಯೆಗಳಿದ್ದು, ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದರು.

ಸಫಾಯಿ ಕರ್ಮಚಾರಿಗಳ ಆಯೋಗದ ಕಚೇರಿಯಲ್ಲೇ ಕಸಗುಡಿಸುವ ಓರ್ವ ಮಹಿಳೆಗೆ ಕನಿಷ್ಠ ವೇತನವಿಲ್ಲದೇ ಕೆಲಸ ಮಾಡುತ್ತಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸುವುದರ ಮೂಲಕ ನನ್ನ ಕರ್ತವ್ಯವನ್ನು ಪ್ರಾರಂಭಿಸಬೇಕು ಎಂದುಕೊಂಡಿದ್ದೇನೆ. ಆಯೋಗದ ಕಚೇರಿಗೆ ಪೌರಕಾರ್ಮಿಕರು ಹಾಗೂ ಸಫಾಯಿ ಕರ್ಮಚಾರಿಗಳು ಕಣ್ಣೀರಿನೊಂದಿಗೆ ಹಲವಾರು ಮನವಿಗಳನ್ನು ಹೊತ್ತುಕೊಂಡು ಬರುತ್ತಾರೆ. ಅವರ ಕಣ್ಣೀರನ್ನು ಹೊರೆಸುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಹಲವರಿಂದ ಅಭಿನಂದನೆ ಸಲ್ಲಿಕೆ:
ಕವಿ ಮತ್ತು ಸಾಹಿತಿ ಶಂಕರ ಸಿ.ಅಂಕನಶೆಟ್ಟಿಪುರ ಅವರು ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಹಲವಾರು ಸಂಘ-ಸಂಸ್ಥೆಗಳ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ. ಆತ್ಮೀಯ ರಂಗಪ್ರಯೋಗ ಟ್ರಸ್ಟ್, ಜಿಲ್ಲಾ ಕಲಾವಿದರ ಬಳಗ, ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ಇನ್ನಿತರೆ ಮುಖಂಡರು, ಸಂಘ-ಸಂಸ್ಥೆಗಳ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Share this Article
Leave a comment