ಚಾಮರಾಜನಗರ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಶ್ರೀರೂಪಾ ಶುಕ್ರವಾರ ಚಾಲನೆ ನೀಡಿದರು.
ನಗರದ ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಇನ್ನಿತರೆ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದ ಮುಂಭಾಗದಿಂದ ಸಾಗಿದ ಮೆರವಣಿಗೆ ಶ್ರೀ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮಾರ್ಗವಾಗಿ ಸಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಅಂತ್ಯವಾಯಿತು. ಬಳಿಕ ವೇದಿಕೆ ಕಾರ್ಯಕ್ರಮ ಪ್ರಾರಂಭವಾಯಿತು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ, ಜಿಲ್ಲಾ ಕಾರ್ಮಿಕ ಅಧಿಕಾರಿ ರಾಘವೇಂದ್ರ ಹಾಗೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.