ಬ್ರಿಮ್ಸ್ ನಲ್ಲಿ ವೈದ್ಯರ ಮೇಲೆ ಹಲ್ಲೆ: ಕ್ರಮಕ್ಕೆ ಈಶ್ವರ ಖಂಡ್ರೆ ಸೂಚನೆ

ಮಣಿಕಂಠ ಜನತಾ ರಾಯಭಾರಿ
1 Min Read

ಬೀದರ್: ಬೀದರ್ ಜಿಲ್ಲಾಸ್ಪತ್ರೆ ಬ್ರಿಮ್ಸ್ ನಲ್ಲಿ ಗುರುವಾರ ತಡರಾತ್ರಿ ಕೆಲವರು ವೈದ್ಯರ ಮೇಲೆ ಹಲ್ಲೆ ಮಾಡಿರುವುದು ಸಮರ್ಥನೀಯವಲ್ಲ ಎಂದಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಯಾರಿಗೂ ಕಾನೂನು ಕೈಗೆ ತೆಗೆದುಕೊಳ್ಳಲು ಅವಕಾಶ ಇರುವುದಿಲ್ಲ. ಇಂತಹ ಪ್ರಕರಣಗಳು ವೈದ್ಯರ ಆತ್ಮಸ್ಥೈರ್ಯವನ್ನೇ ಕುಗ್ಗಿಸುತ್ತವೆ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಹಾಗೂ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಭದ್ರತೆ ನಡಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಸೂಚಿಸಿದ್ದಾರೆ.

Share this Article
Leave a comment