ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದ ಎಂಎಲ್ಸಿ ಡಾ.ಕೆ.ಶಿವಕುಮಾರ್ ಕಚೇರಿ ಉದ್ಘಾಟನೆ 

ಮಣಿಕಂಠ ಜನತಾ ರಾಯಭಾರಿ
1 Min Read

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಜಲದರ್ಶಿನಿಯಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾದ ಡಾ. ಶಿವಕುಮಾರ್ ಅವರ ಕಚೇರಿಯನ್ನು ಶನಿವಾರ ಉದ್ಘಾಟಿಸಿದರು.

ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಜಲದರ್ಶಿನಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಕೆ.ಶಿವಕುಮಾರ್ ಅವರು, ಸಾರ್ವಜನಿಕರ ಕುಂದುಕೊರತೆಗಳನ್ನು ವಿಚಾರಿಸಲು ಅನುಕೂಲವಾಗುವಂತೆ ನೂತನ ಕಚೇರಿ ತೆರಿದ್ದಿದ್ದರು. ಶನಿವಾರ ಆಯೋಜಿಸಿದ್ದ ನೂತನ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಕಚೇರಿ ಉದ್ಘಾಟಿಸುವ ಮೂಲಕ ಹಾರೈಸಿದರು.

ಈ ವೇಳೆ ನಗರಭಿವೃದ್ಧಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ಶಾಸಕರಾದ ಹರೀಶ್ ಗೌಡ, ಡಿ.ರವಿಶಂಕರ್, ದರ್ಶನ್ ಧ್ರುವನಾರಾಯಾಣ್, ವಿಧಾನ ಪರಿಷತ್ತಿನ ಸದಸ್ಯರಾದ ಡಾ.ಕೆ.ಶಿವಕುಮಾರ್, ಮಾಜಿ ಶಾಸಕರಾದ ಮಂಜುನಾಥ್, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪುಷ್ಪ ಅಮರ್ನಾಥ್, ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ರಾಮಪ್ಪ, ಕರ್ನಾಟಕ ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ರಂಗಸ್ವಾಮಿ, ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್ ಹಾಗೂ ಇತರರು ಹಾಜರಿದ್ದರು.

Share this Article
Leave a comment