ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಸೋಮಹಳ್ಳಿ ಕೆರೆಯಲ್ಲಿ ವನ್ಯಜೀವಿ ಭೇಟೆ ಮಾಡಲು ಬಂದಿದ್ದ ಮೂವರನ್ನು ಅರಣ್ಯ ಇಲಾಖೆಯವರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ ಬಳಿಕ ಪೊಲೀಸರಿಗೆ ಒಪ್ಪಿಸಿರುವ ಘಟನೆ ವರದಿಯಾಗಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಸೋಮಹಳ್ಳಿ ಕೆರೆಯ ಬಳಿ ಸಂತೋಷ್ ಕುಮಾರ್, ಕೃಷ್ಣ ಹಾಗೂ ಗೋಪಾಲಶೆಟ್ಟಿ ರವರುಗಳು ವನ್ಯ ಜೀವಿ ಭೇಟೆಯಲ್ಲಿ ತೊಡಗಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಗುಂಡ್ಲುಪೇಟೆ ಬಫರ್ ಜೋನ್ ವಲಯ ಅರಣ್ಯಾಧಿಕಾರಿ ಶಿವಕುಮಾರ್ ರವರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ ಬಳಿಕ ಆರೋಪಿಗಳನ್ನು ಬೇಗೂರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಂಧಿತ ಮೂವರು ಆರೋಪಿಗಳಿಂದ ಪರವಾನಗಿ ರಹಿತದ ನಾಡಬಂದೂಕು, ಹಾಗೂ ಸ್ಪೋಟಕ ವಸ್ತುಗಳನ್ನು ಜಪ್ತಿಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ಬೇಗೂರು ಸಬ್ ಇನ್ಸ್ಪೆಕ್ಟರ್ ನವೀನ್ ಹೆಚ್.ಕೆ ರವರು ನ್ಯಾಯಾಲಯ ಹಾಜರು ಪಡಿಸಿದ್ದು, ನ್ಯಾಯಾಲಯವು ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.