ಚಾಮರಾಜನಗರ: ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಮೇ 13ರಂದು ಚಾಮರಾಜನಗರ ಪಟ್ಟಣಕ್ಕೆ ಭೇಟಿ ನೀಡಿ ಅಲ್ಲಿನ ಪ್ರವಾಸಿಮಂದಿರದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.
ಸಾರ್ವಜನಿಕರು ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಭರ್ತಿ ಮಾಡಿ ಸಲ್ಲಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಿ ವಿಚಾರಣೆ ನಡೆಸುವರು. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳ ಅನಗತ್ಯ ವಿಳಂಬ, ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ದ ದೂರುಗಳನ್ನು ನಿಗದಿತ ನಮೂನೆ-1 ಮತ್ತು 2ರಲ್ಲಿ ನೀಡಬಹುದು.

ಚಾಮರಾಜನಗರದ ನಾಗರೀಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.