ಮೈಸೂರು: ಮೈಸೂರು ಮಹಾನಗರ ಪಾಲಿಕೆ ನೂತನ ಆಯುಕ್ತೆಯಾಗಿ ಎಂ.ಕೆ.ಸವಿತಾ ಅವರನ್ನು ನೇಮಕ ಮಾಡಿ ಸರ್ಕಾರ ಮಂಗಳವಾರ ಆದೇಶಿಸಿದೆ.
ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ವರ್ಗಾವಣೆಯಾದ ಹಿನ್ನೆಲೆಯಲ್ಲಿ, ಅವರ ಜಾಗಕ್ಕೆ ಎಂ.ಕೆ.ಸವಿತಾ ಅವರನ್ನು ನೇಮಕ ಮಾಡಲಾಗಿದೆ.
ಸದ್ಯ ಮೈಸೂರು ಮಹಾನಗರ ಪಾಲಿಕೆ ನೂತನ ಆಯುಕ್ತೆಯಾಗಿರುವ ಎಂ.ಕೆ.ಸವಿತಾ ಅವರು ಮೈಸೂರು ವಿಶ್ವ ವಿದ್ಯಾಲಯದ ಕುಲಸಚಿವೆಯಾಗಿ ಈವರೆಗೆ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿಯಾಗಿಯೂ ಮೈಸೂರಿನಲ್ಲಿ ಅವರು ಸೇವೆ ಸಲ್ಲಿಸಿದ್ದರು.