ಯುವಕರು ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಿ- ಶಾಸಕ ಸಿ.ಪುಟ್ಟರಂಗಶೆಟ್ಟಿ 

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಯುವಕರು ಸಹಕಾರಿ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ನಾಯಕರಾಗಿ ಬೆಳೆಯಬಹುದಾಗಿದೆ ಎಂದು ಶಾಸಕ ಹಾಗೂ ಎಂಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಸಿ.ಪುಟ್ಟರಂಗಶೆಟ್ಟಿ ಸಲಹೆ ನೀಡಿದರು.

ತಾಲೂಕಿನ ಬಿಸಲವಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಪ್ರಸ್ತುತ ಯುವಕರು ರಾಜಕೀಯ ಕ್ಷೇತ್ರಕ್ಕೆ ಹೆಚ್ಚು ಒಲವು ಹೊಂದಿದ್ದಾರೆ. ಬದಲಾಗಿ ಸಹಕಾರಿ ಕ್ಷೇತ್ರದಲ್ಲಿ ಪಾಲ್ಗೊಂಡರೆ ತಳಮಟ್ಟದಿಂದ ಬೆಳೆದು ಮುಂದಿನ ದಿನಗಳಲ್ಲಿ ಉತ್ತಮ ನಾಯಕರಾಗಿ ಬೆಳೆಯಬಹುದು. ಸಹಕಾರಿ ಕ್ಷೇತ್ರದಲ್ಲಿದ್ದರೆ ಜನ ಸಾಮಾನ್ಯರ ಒಡನಾಟ ಹೆಚ್ಚಿ ಅವರ ಬೆಂಬಲದಿಂದಲೇ ಸಮಾಜದ ಮುಂಚೂಣಿಗೆ ಬರಬಹುದು ಎಂದು ಹೇಳಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಕೆ.ರವಿಕುಮಾರ್ ಮಾತನಾಡಿ, ಗಡಿ ಭಾಗವಾದ ಬಿಸಲವಾಡಿ ಪ್ರಾಥಮಿಕ ಕೃಷಿ ಪತ್ತಿನ ಸಂಘದ ರೈತರಿಗೆ ಹೆಚ್ಚಿನ ಸಾಲಕ್ಕೆ ಶಿಫಾರಸ್ಸು ಮಾಡಿ ರೈತರ ಕೃಷಿ ಚಟುವಟಿಕೆಗಳಿಗೆ ಬೆಂಬಲ ನೀಡಲು ಶಾಸಕರಲ್ಲಿ ಮನವಿ ಮಾಡಿದರು.

ನೂತನ ಅಧ್ಯಕ್ಷ ಬಂದಿಗೌಡನಹಳ್ಳಿ ಗ್ರಾಮದ ಬಸವಣ್ಣ ಉಪಾಧ್ಯಕ್ಷ ಬಿಸಲವಾಡಿ ಗ್ರಾಮದ ಸಿದ್ದಶೆಟ್ಟಿ ಶಾಸಕರು ಹಾಗೂ ನಿರ್ದೇಶಕರು ಮುಖಂಡರ ಬೆಂಬಲದಿಂದ ಸಂಘದ ಬೆಳವಣಿಗೆಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಸಿ.ಮಹದೇವಪ್ಪ , ನಾರಾಯಣ ನಾಯಕ, ಕುಮಾರ, ಗುರುಶಾಂತ, ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ರವಿ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು, ಮುಖಂಡರಾದ ಸಿದ್ದನಾಯಕ, ಚನ್ನಬಸವ, ಮಹಾದೇವಣ್ಣ, ಪ್ರಾಥಮಿಕ ಕೃಷಿ ಪತ್ತಿನ ಸಂಘದ ಮಾಜಿ ಅಧ್ಯಕ್ಷ ಶಿವಸ್ವಾಮಿ, ನಿರ್ದೇಶಕರಾದ ನಾಗರಾಜು, ಉಮೇಶ್, ಕಾರ್ಯನಿರ್ವಾಹಕ ಅಧಿಕಾರಿ ಅಶೋಕ್, ಮಲ್ಲೇಶ್ ಹಾಗೂ ಇತರರು ಹಾಜರಿದ್ದರು.

Share this Article
Leave a comment