ರೈತರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆಯಾಯ್ತು

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಜಿಲ್ಲೆಯ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಚಾಮರಾಜನಗರ ಪ್ರಾದೇಶಿಕ ವಲಯ ವ್ಯಾಪ್ತಿಯ ಹರದನಹಳ್ಳಿ ಹೋಬಳಿಯ ಹೊನ್ನಹಳ್ಳಿ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಚಿರತೆಯ ಹಾವಳಿ ಹೆಚ್ಚಾಗಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬೋನನ್ನು ಅಳವಡಿಸಲಾಗಿತ್ತು.

ಜೂ. 4 ರಂದು ಸುಮಾರು 5 ವರ್ಷದ ಗಂಡು ಚಿರತೆಯೊಂದು ಅಳವಡಿಸಿದ್ದ ಬೋನಿಗೆ ಬಿದ್ದಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿದಿದ್ದಾರೆ.

ಪಶುವೈದ್ಯರ ತಪಾಸಣೆ ನಡೆಸಿದ ನಂತರ ಚಿರತೆಯು ಆರೋಗ್ಯವಾಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಮಾರ್ಗಸೂಚಿಗಳ ಅನ್ವಯ ಸೂಕ್ತ ಅರಣ್ಯ ಪ್ರದೇಶದಲ್ಲಿ ಸುರಕ್ಷಿತವಾಗಿ ಬಿಡುಗಡೆ ಮಾಡಲಾಗಿದೆ ಎಂದು ಚಾಮರಾಜನಗರ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this Article
Leave a comment