ಚಾಮರಾಜನಗರ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಅವರು ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ ಚಾಮರಾಜನಗರದ ಕೋಡಿಮೋಳೆ ಗ್ರಾಮದಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ ನಡೆಯಿತು.
ತಾಲೂಕಿನ ಕೋಡಿಮೋಳೆ ಗ್ರಾಮದಲ್ಲಿ ಟಿ ವಿ ಕೆ ಪಕ್ಷದ ಮುಖ್ಯಸ್ಥ ಜೋಸೆಫ್ ವಿಜಯ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಸಿಹಿ ಹಂಚಿ, ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆ ಮಾಡಿದರು.

ಈ ಸಂದರ್ಭದಲ್ಲಿ ಭಗತ್ ಸಂಗ್ ಯುವಸೇನೆ ಅಧ್ಯಕ್ಷ ಕಾಂತರಾಜು ಮಾತನಾಡಿ, ಕಿರಿಯ ವಯಸ್ಸಿನ ಉದಯೋನ್ಮುಖ ಯುವಕರಾಗಿರುವ, ದಳಪತಿ ವಿಜಯ್ ಎಂದೇ ಖ್ಯಾತಿ ಹೊಂದಿರುವ ತಮಿಳು ಚಿತ್ರರಂಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿ ಬಳಗ ಹೊಂದಿರುವ ನಟರಾಗಿರುವ ಜೋಸೆಫ್ ವಿಜಯ್ ಈ ಬಾರಿ ನಡೆದ ತಮಿಳುನಾಡಿದ ವಿಧಾನಸಭಾ ಚುನಾವಣೆಯಲ್ಲಿ ಅವರ ಟಿವಿಕೆ ಪಕ್ಷ ಅತೀ ಹೆಚ್ಚು ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಅವರ ಟಿವಿಕೆ ಪಕ್ಷ ಅಧಿಕಾರಕ್ಕೆ ಬಂದಿರುವುದು ಸಂತಸ ತಂದಿದೆ ಎಂದರು.
ಈ ವೇಳೆ ವಿಜಯ್ ಅಭಿಮಾನಿಗಳಾದ ಮನು, ಮಹೇಶ್, ಪ್ರಸಾದ್, ಮನೋಜ್, ಕಿರಣ್, ಮಣಿ , ಪುನೀತ್, ಚಿರು ಇತರರು ಹಾಜರಿದ್ದರು
.