ಶೀಘ್ರ ಮೇಕೆದಾಟು ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಈ ಯೋಜನೆಯ ಕಚೇರಿ ಆರಂಭಿಸಿದ್ದೇವೆ. ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯ ಜಮೀನು ನೀಡಲು ಜಮೀನು ಗುರುತಿಸುತ್ತಿದ್ದೇವೆ. ಶೀಘ್ರವೇ ಕೇಂದ್ರಕ್ಕೆ ಡಿಪಿಆರ್ ಸಲ್ಲಿಕೆ ಮಾಡಲಿದ್ದು, ಕೇಂದ್ರ ಸರ್ಕಾರ ಅನುಮತಿ ಬಂದ ಬಳಿಕ ಯೋಜನೆಯ ಭೂಮಿ ಪೂಜೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕೊಳ್ಳೇಗಾಲ ಹೆಲಿಪ್ಯಾಡ್ ಹಾಗೂ ಮಧ್ಯರಂಗ ದೇಗುಲದ ಬಳಿ ಮಾಧ್ಯಮದವರ ಜತೆ ಗುರುವಾರ ಮಾತನಾಡಿದರು.

ಕಾವೇರಿ ವಿಚಾರದಲ್ಲಿ ತಮಿಳುನಾಡಿಗೆ 177 ಟಿಎಂಸಿ ನೀರನ್ನು ಬಿಡಲೇಬೇಕು ಎಂದು ಸ್ಪಷ್ಟ ಆದೇಶ ನೀಡಲಾಗಿದೆ. ಇದನ್ನು ಹೇಗೆ ಬಗೆಹರಿಸಬೇಕು ಎಂದು ಮುಂದಿನ ದಿನಗಳಲ್ಲಿ ಚರ್ಚೆ ಮಾಡುತ್ತೇನೆ. ಮೇಕೆದಾಟು ಯೋಜನೆಗೆ ಆಕ್ಷೇಪ ಸಲ್ಲಿಸಲು ತಮಿಳುನಾಡಿಗೆ ಯಾವುದೇ ರೀತಿಯ ಹಕ್ಕಿಲ್ಲ, ಇದರ ಬಗ್ಗೆ ಕೇಂದ್ರ ಜಲ ಆಯೋಗ ತೀರ್ಮಾನ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ ಎಂದರು.

ಅಧಿಕಾರದಲ್ಲಿರುದಕ್ಕಿಂತ ಅಧಿಕಾರದಲ್ಲಿದ್ದಾಗ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯ. ನಮ್ಮ ಸರ್ಕಾರಕ್ಕೆ ಮೂರು ವರ್ಷ ಪೂರ್ಣಗೊಂಡಿದೆ. ಕೊಟ್ಟ ಮಾನಿತಂದೆ ನಡೆದಿದ್ದೇವೆ. ಜೊತೆಗೆ ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ಯೋಜನೆ ನೀಡಿದ್ದೇವೆ. ಪ್ರತಿಯೊಬ್ಬ ಫಲಾನುಭವಿಗಳ ಆಸ್ತಿ ದಾಖಲೆಗಳಲ್ಲಿ ಅವರ ಫೋಟೋ, ಆಸ್ತಿಯ ಫೋಟೋ ಹಾಕಿ ಮನೆ ಮನೆಗೆ ಖಾತೆ ಒದಗಿಸಿಕೊಡುತ್ತಿದ್ದೇವೆ. ಬೇರೆಯವರು ಮಾಡಲಾಗದ ಕೆಲಸವನ್ನು ನಾವು ಮಾಡಿ ಜನರ ಋಣ ತೀರಿಸುತ್ತಿದ್ದೇವೆ. ಮುಂದಿನ 2 ವರ್ಷಗಳಲ್ಲಿ ಇನ್ನು ಹೆಚ್ಚಿನ ಕೆಲಸ ಮಾಡುತ್ತಿದ್ದೇವೆ. ಕಳೆದ ಎರಡು ವರ್ಷ ಉತ್ತಮ ಮಳೆಯಾಗಿತ್ತು. ಈ ವರ್ಷ ಮಳೆ ಕೊರತೆಯಾದಿರೆ ರೈತರನ್ನು ಹೇಗೆ ಕಾಪಾಡಬೇಕು, ಕುಡಿಯುವ ನೀರಿನ ಸಮಸ್ಯೆ ಹೇಗೆ ಬಗೆಹರಿಸಬೇಕು ಎಂದು ಚರ್ಚೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

Share this Article
Leave a comment