ಶೂಟೌಟ್ ಪ್ರಕರಣ: ಸ್ಥಳಕ್ಕೆ ಡಿವೈಎಸ್ಪಿ, ಸಾಕ್ಷ್ಯ ಸಂಗ್ರಹ ತಂಡ ಭೇಟಿ

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಕಾವೇರಿ ವನ್ಯಧಾಮದಲ್ಲಿ ನಡೆದ ಶೂಟೌಟ್ ಪ್ರಕರಣದ ತನಿಖೆ ಮುಂದುವರಿದಿದ್ದು, ಡಿವೈಎಸ್ಪಿ, ಸೋಕೋ ಹಾಗೂ ಬೆರಳಚ್ಚು ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಕೊಳ್ಳೇಗಾಲ ಡಿವೈಎಸ್ಪಿ ಮೋಹನ್ ನೇತೃತ್ವದಲ್ಲಿ ತಂಡವು ಘಟನೆ ನಡೆದ ಸ್ಥಳವನ್ನು ಪರಿಶೀಲಿಸಿದೆ. ಇದಕ್ಕೂ ಮುನ್ನ ತನಿಖಾಧಿಕಾರಿ ದಿನೇಶ್ ಕುಮಾರ್ ಮೀನಾ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಘಟನೆ ನಡೆದ ಸ್ಥಳದಲ್ಲಿ ರಕ್ತದ ಮಾದರಿ, ಪ್ರತಿದಾಳಿ ವೇಳೆ ಬಳಸಲಾಗಿದೆ ಎನ್ನಲಾದ ಬುಲೆಟ್‌ಗಳು ಹಾಗೂ ಅರಣ್ಯಾಧಿಕಾರಿಗಳು ಗುಂಡಿನ ದಾಳಿ ನಡೆಸಿದ ಸಂದರ್ಭದಲ್ಲಿ ಬಳಸಿದ ಪೆಲೆಟ್‌ಗಳ ಕುರಿತು ಮಾಹಿತಿ ಹಾಗೂ ಸಾಕ್ಷ್ಯಗಳನ್ನು ತಂಡ ಸಂಗ್ರಹಿಸುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಸ್ಥಳದಲ್ಲಿರುವ ಪ್ರತಿಯೊಂದು ಸಾಕ್ಷ್ಯ ಹಾಗೂ ಮಾಹಿತಿಯನ್ನು ಕೂಲಂಕಷವಾಗಿ ದಾಖಲಿಸಿಕೊಳ್ಳಲಾಗುತ್ತಿದ್ದು, ಪ್ರಕರಣದ ತನಿಖೆ ಇನ್ನೂ ಮುಂದುವರಿದಿದೆ.

Share this Article
Leave a comment