ಸಚಿವ ಸಿ.ಪುಟ್ಟರಂಗಶೆಟ್ಟಿ ಅವರ ಇಚ್ಛಾಶಕ್ತಿ ಏನಾಯ್ತು?; ಬಿಎಸ್ಪಿ ಎನ್.ನಾಗಯ್ಯ ಟೀಕೆ 

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಜಿಲ್ಲಾ ಕೇಂದ್ರದ ಅಭಿವೃದ್ಧಿಯಲ್ಲಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರ ಇಚ್ಛಾಶಕ್ತಿ ಮತ್ತು ಕಾಳಜಿ ಏನಾಯ್ತು? ಎಂದು ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಎನ್.ನಾಗಯ್ಯ ಅವರು ಟೀಕಿಸಿದ್ದಾರೆ.

ಹನೂರು ತಾಲೂಕು ಕೇಂದ್ರದಲ್ಲಿ ಕೆ.ಎಸ್.ಆರ್.ಟಿ.ಸಿ ನೂತನ ಬಸ್ ಘಟಕ ನಿರ್ಮಾಣಕ್ಕೆ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದ್ದರು. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಬಿಎಸ್ಪಿ ನಾಗಯ್ಯ ಅವರು, ಸಚಿವರ ಇಚ್ಛಾಶಕ್ತಿ ಮತ್ತು ಕಾಳಜಿಯನ್ನು ಪ್ರಶ್ನೆ ಮಾಡಿದ್ದಾರೆ.

ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಕೆ.ಎಸ್.ಆರ್.ಟಿ.ಸಿ ನೂತನ ಬಸ್ ನಿಲ್ದಾಣ ಹಾಗೂ ಹನೂರು ತಾಲೂಕಿನಲ್ಲಿ ಕೆ.ಎಸ್.ಆರ್.ಟಿ.ಸಿ ನೂತನ ಬಸ್ ಘಟಕ ನಿರ್ಮಾಣಕ್ಕೆ ಅಂದೇ ಬಾರಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಹನೂರು ಶಾಸಕ ಎಂ.ಆರ್.ಮಂಜುನಾಥ್ ಅವರ ಇಚ್ಛಾಶಕ್ತಿ ಮತ್ತು ಕಾಳಜಿಯಿಂದ ಹನೂರಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಘಟಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿತು. ಆದರೆ ಸಚಿವ ಪುಟ್ಟರಂಗಶೆಟ್ಟಿ ಅವರಿಗೆ ಈ ಇಚ್ಛಾಶಕ್ತಿ ಮತ್ತು ಕಾಳಜಿ ಇಲ್ಲವಾಯಿತೇ ಎಂದು ಟೀಕಿಸಿದ್ದಾರೆ.

Share this Article
Leave a comment