ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಅಬಕಾರಿ ಇಲಾಖೆಯ ಅಧಿಕಾರಿ ಹಾಗೂ ಬಾಮೈದ ವೈ. ಮಂಜುನಾಥ್ ಅವರಿಗೆ ಸಂಬಂಧಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ED) ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದೆ.
ಅಬಕಾರಿ ಇಲಾಖೆಯಲ್ಲಿ ನಡೆದಿರುವುದಾಗಿ ಆರೋಪಿಸಲಾಗಿರುವ ಅಕ್ರಮಗಳು, ಪರವಾನಗಿ ನೀಡಿಕೆ ಹಾಗೂ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ವಿಚಾರಗಳು ತನಿಖೆಯ ವ್ಯಾಪ್ತಿಯಲ್ಲಿವೆ ಎನ್ನಲಾಗಿದೆ.
ಹಿಂದೆಯೂ ವೈ. ಮಂಜುನಾಥ್ ಅವರಿಗೆ ಸಂಬಂಧಿಸಿದ ಬೆಂಗಳೂರು, ಬೆಳಗಾವಿ, ಮೈಸೂರು ಸೇರಿದಂತೆ ಹಲವು ಸ್ಥಳಗಳಲ್ಲಿ ED ಶೋಧ ನಡೆಸಿತ್ತು. ಆ ವೇಳೆ ಅಕ್ರಮ ಹಣ ವರ್ಗಾವಣೆ, ಬೇನಾಮಿ ಆಸ್ತಿ ಹಾಗೂ ಅಸಮರ್ಪಕ ಆಸ್ತಿ ಗಳಿಕೆ ಕುರಿತ ಆರೋಪಗಳ ಬಗ್ಗೆ ತನಿಖೆ ನಡೆದಿತ್ತು.
ಇದೀಗ ಮತ್ತೆ ದಾಳಿ ನಡೆದಿದೆ. ಈ ದಾಳಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದೆ. ಆದರೆ ಇಂದಿನ ಕಾರ್ಯಾಚರಣೆಯ ನಿಖರ ಸ್ಥಳಗಳು, ವಶಪಡಿಸಿಕೊಂಡ ದಾಖಲೆಗಳು ಅಥವಾ ಹಣದ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.