ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹೇಳಿಕೆ ಪೋಸ್ಟ್ ಮಾಡುವವರಿಗೆ ಎಚ್ಚರಿಕೆ

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ, ಆ.26: ಹನೂರು ತಾಲೂಕಿನ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹೇಳಿಕೆಗಳನ್ನು ಪೋಸ್ಟ್ ಮಾಡುವವರಿಗೆ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಿದೆ.

ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಹೊಳೆಮುರಿದಟ್ಟಿ ಮತ್ತು ಕರಡಿಗುಡ್ಡ ಘಟನೆಗೆ ಸಂಬಂಧಪಟ್ಟಂತೆ, ಈಗಾಗಲೇ ಪ್ರಕರಣಗಳನ್ನು ದಾಖಲಿಸಿಕೊಂಡು, ಸರ್ಕಾರದ ಆದೇಶದಂತೆ ಉನ್ನತ ಮಟ್ಟದ ತನಿಖೆ ಕೈಗೊಂಡಿರುತ್ತದೆ. ಈ ವಿಚಾರವಾಗಿ ಕೆಲವು ವ್ಯಕ್ತಿಗಳು ಸಾಮಾಜಿಕ ಜಾಲತಾಣದಲ್ಲಿ ಪರ ಮತ್ತು ವಿರೋಧ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಿದ್ದು, ಸುಳ್ಳು ಸುದ್ದಿಗಳು, ಆಡಿಯೋ ಸಂದೇಶಗಳು, ಪ್ರಚೋದನಕಾರಿಯಾಗಿ ಪೋಸ್ಟ್‌ಗಳನ್ನು ಮಾಡುತ್ತಿರುತ್ತಾರೆ.

ಇದರಿಂದ ಎರಡು ರಾಜ್ಯಗಳ, ಎರಡು ಭಾಷೆಗಳ ಮತ್ತು ಎರಡು ಜನಾಂಗಗಳ ನಡುವೆ ದ್ವೇಷ ಭಾವನೆಗಳು ಉಂಟಾಗುವ ಸಂಭವವಿರುವುದರಿಂದ ಜಿಲ್ಲಾ ಪೊಲೀಸ್ ಕಛೇರಿಯ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ (District Social Media Monitoring Cell) ನಲ್ಲಿ ಸತತವಾಗಿ ಸಾಮಾಜಿಕ ಜಾಲತಾಣಗಳಲ್ಲಿ ನಿಗಾವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನಿರಂತರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವವರ ಬಗ್ಗೆ ನಿರಂತರ ನಿಗಾವಣೆ ಮಾಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುಳ್ಳು ಸುದ್ದಿಗಳು, ಆಡಿಯೋ ಸಂದೇಶಗಳು, ಕೋಮು ಸೌಹಾರ್ದ, ಕಾನೂನು ಸುವ್ಯವಸ್ಥೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆವುಂಟುಮಾಡುವಂತಹ ಪದಬಳಕೆ ಹಾಗೂ ಪೋಸ್ಟ್‌ಗಳನ್ನು ಹಾಕಿದ್ದಲ್ಲಿ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ ಕಾನೂನು ರೀತ್ಯಾ ಕ್ರಮ ಕೈಗೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this Article
Leave a comment