ಹುಲಿ ಸೆರೆಗೆ ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿ

ಮಣಿಕಂಠ ಜನತಾ ರಾಯಭಾರಿ
0 Min Read

ಚಾಮರಾಜನಗರ: ತಾಲೂಕಿನ ಬಾಗಳಿ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ.

ತಾಲೂಕಿನ ಬಾಗಳಿ ಗ್ರಾಮದಲ್ಲಿ ಸೋಮವಾರ ಬೆಳಗಿನ ಜಾವ ಪುಟ್ಟಯ್ಯ ಎಂಬುವವರ ಜಮೀನಿನಲ್ಲಿ ವ್ಯಾಘ್ರವೊಂದು ಕಾಣಿಸಿಕೊಂಡಿತ್ತು. ಈ ವೇಳೆ ಪುಟ್ಟಯ್ಯ ಅವರ ಮೇಲೆ ದಾಳಿ ನಡೆಸಲು ಕೂಡ ಮುಂದಾಗಿತ್ತು. ಆದರೆ ಅದೃಷ್ಟವಶಾತ್ ಪುಟ್ಟಯ್ಯ ಹುಲಿ ದಾಳಿಯಿಂದ ಪಾರಾಗಿದ್ದರು.

ಬಾಗಳಿ ಗ್ರಾಮದ ಜಮೀನೊಂದರಲ್ಲಿ ಹುಲಿ ಕಾಣಿಸಿಕೊಂಡ ಬೆನ್ನಲ್ಲೇ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜನರು ಆತಂಕಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಹುಲಿಯನ್ನು ಸೆರೆಹಿಡಿಯಲು ಮುಂದಾಗಿದೆ. ಬಾಗಳಿ ಸುತ್ತಮುತ್ತಲಿನ ಜಮೀನಿನಲ್ಲಿ ಬೋನ್ ಇರಿಸಿ ಹುಲಿಯನ್ನು ಸೆರೆ ಹಿಡಿಯಲು ಪ್ರಯತ್ನ ನಡೆಸುತ್ತಿದ್ದಾರೆ.

Share this Article
Leave a comment