ಚಾಮರಾಜನಗರ: ತೆರಕಣಾಂಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹುಲಿ ದಾಳಿಯಿಂದಾಗಿ ಹಸುವೊಂದು ಮೃತಪಟ್ಟಿದೆ.
ತಾಲೂಕಿನ ಹೂರದಹಳ್ಳಿ ಗ್ರಾಮದ ನಿವಾಸಿ ಮಲ್ಲಪ್ಪ ಬಿನ್ ನಾಗಪ್ಪ ಎಂಬುವವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಹಸು ಮೃತಪಟ್ಟಿದೆ. ಈ ಸಂಬಂಧ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಭಾಗದಲ್ಲಿ ಹುಲಿ ಮತ್ತು ಚಿರತೆ ದಾಳಿಯಿಂದ ನಿರಂತರವಾಗಿ ರೈತರು ಹಾಗೂ ಗ್ರಾಮಸ್ಥರು ಆತಂಕದ ವಾತಾವರಣದಲ್ಲಿ ಇರಬೇಕಾದ ಪರಿಸ್ಥಿತಿ ಉಂಟಾಗಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಸೆರೆಗೆ ಕ್ರಮವಹಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.