ಹೌಸಿಂಗ್ ಬೋರ್ಡ್ ನಿವಾಸಿಗಳಿಂದ ಅದ್ಧೂರಿ ಅಂಬೇಡ್ಕರ್ ಜಯಂತಿ 

ಮಣಿಕಂಠ ಜನತಾ ರಾಯಭಾರಿ
1 Min Read
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.58527744, 0.12921855);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 47;

ಚಾಮರಾಜನಗರ: ನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ.ಭೀಮ್ ರಾವ್ ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಭಾನುವಾರ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು.

ನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನವನದ ಮುಂಭಾಗ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆಗೆ ಸಂಘದ ಅಧ್ಯಕ್ಷ ವಿ.ಮಹದೇವಯ್ಯ ಚಾಲನೆ ನೀಡಿದರು. ಕಾಲೋನಿಯ ವಿವಿಧ ರಸ್ತೆಗಳಲ್ಲಿ ಸಾಗಿದ ಮೆರವಣಿ ವೇದಿಕೆ ಕಾರ್ಯಕ್ರಮ ನಿಗದಿಯಾಗಿದ್ದ ಅಂಬೇಡ್ಕರ್ ಪಾರ್ಕ್ ಬಳಿ ಅಂತ್ಯವಾಯಿತು. ಮೆರವಣಿಗೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕುಣಿದು ಕುಪ್ಪಳಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಿ.ಮಹದೇವಯ್ಯ ಮಾತನಾಡಿ, ಪ್ರತಿವರ್ಷದಂತೇ ಈ ವರ್ಷವೂ ಡಾ.ಭೀಮ್ ರಾವ್ ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಭೀಮೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಂಬೇಡ್ಕರ್ ಅವರ ತತ್ವ-ಸಿದ್ಧಾರಂತಗಳು ಪ್ರಸ್ತುತ ಜಗತ್ತಿಗೆ ಪ್ರೇರಣೆಯಾಗಿದೆ. ಅವರ ಅಪಾರವಾದ ಜ್ಞಾನ ನಮ್ಮ ದೇಶದ ಪ್ರಗತಿಗೆ ಬಹುದೊಡ್ಡ ಕೊಡುಗೆ ನೀಡಿದೆ ಎಂದರು.

ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಶಿವಮೂರ್ತಿ, ಉಪಾಧ್ಯಕ್ಷರಾದ ಶಿವಕುಮಾರ್, ಮೋಹನಾಂಭ, ಪಿ.ಯಶೋಧರ, ಖಜಾಂಚಿ ಎಚ್.ವಿ.ಕೃಷ್ಣಮೂರ್ತಿ, ಕಾರ್ಯದರ್ಶಿಗಳಾದ ದೊರೆಸ್ವಾಮಿ, ಶಿವು, ಪವನ್ ಕುಮಾರ್, ನಿರ್ದೇಶಕರಾದ ಕಲ್ಯಾಣಮ್ಮ, ಯತೀಶ್, ಪ್ರತಾಪ್, ಉಮೇಶ್, ಬಿ.ಕೃಷ್ಣ, ನಾಗೇಂದ್ರ, ರವಿ ಅರಸು, ನಾಗ ಬಸವಣ್ಣ, ಶೃಂಗಾರ್, ಮಲ್ಲಿಕಾರ್ಜುನಸ್ವಾಮಿ, ಪ್ರಕಾಶ್, ಕಾಂತರಾಜು, ನಂಜುಂಡಯ್ಯ, ಇಂದ್ರಾಣಿ, ಹನುಮಂತಯ್ಯ ಹಾಗೂ ಇತರರು ಉಪಸ್ಥಿತರಿದ್ದರು.

Share this Article
Leave a comment