ಅಧಿಕಾರಕ್ಕೆ ಬರುತ್ತಲೇ ಸಿಎಂ ಡಿ.ಕೆ.ಶಿವಕುಮಾರ್ ಅವರಿಂದ ಭರ್ಜರಿ ಗಿಫ್ಟ್!

ಮಣಿಕಂಠ ಜನತಾ ರಾಯಭಾರಿ
1 Min Read

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡ ತಕ್ಷಣವೇ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ವಿದ್ಯಾರ್ಥಿ ಸಮುದಾಯಕ್ಕೆ ಅತ್ಯಂತ ಮಹತ್ವದ ಕೊಡುಗೆಯೊಂದನ್ನು ಘೋಷಿಸಿದ್ದಾರೆ.

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿ ನಡೆಸಿದ ತಮ್ಮ ಚೊಚ್ಚಲ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ‘ಉಚಿತ ಬಸ್ ಪಾಸ್’ ನೀಡುವುದಾಗಿ ಸಿಎಂ ಪ್ರಕಟಿಸಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದ ಬೆನ್ನಲ್ಲೇ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಹೊಸ ಸರ್ಕಾರದ ಮೊದಲ ಆದ್ಯತೆಯಾಗಿ ಶಿಕ್ಷಣ ಮತ್ತು ಯುವ ಸಮುದಾಯಕ್ಕೆ ಶಕ್ತಿ ತುಂಬುವ ಕೆಲಸ ಮಾಡಲಾಗುವುದು ಎಂದು ಮುಖ್ಯಮಂತ್ರಿ ಈ ವೇಳೆ ತಿಳಿಸಿದರು. ಈ ಯೋಜನೆಯಡಿ ಒಂದನೇ ತರಗತಿಯಿಂದ ಹಿಡಿದು ಸ್ನಾತಕೋತ್ತರ ಪದವಿ (PG), ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಎಲ್ಲಾ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪ್ರಯಾಣದ ಸೌಲಭ್ಯ ಸಿಗಲಿದೆ.

ಈ ಹಿಂದೆ ಜಾರಿಯಲ್ಲಿದ್ದ ‘ಶಕ್ತಿ’ ಯೋಜನೆಯಡಿ ಕೇವಲ ವಿದ್ಯಾರ್ಥಿನಿಯರಿಗಷ್ಟೇ ಉಚಿತ ಪ್ರಯಾಣದ ಅವಕಾಶವಿತ್ತು. ಆದರೆ ಈಗ ನೂತನ ಮುಖ್ಯಮಂತ್ರಿಗಳು ಲಿಂಗಭೇದವಿಲ್ಲದೆ ಎಲ್ಲಾ ವಿದ್ಯಾರ್ಥಿಗಳಿಗೂ, ಅಂದರೆ ವಿದ್ಯಾರ್ಥಿನಿಯರ ಜೊತೆಗೆ ವಿದ್ಯಾರ್ಥಿಗಳಿಗೂ (ಬಾಯ್ಸ್) ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಿದ್ದಾರೆ. ಇದರಿಂದಾಗಿ ರಾಜ್ಯದ ಲಕ್ಷಾಂತರ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಹೊರ ಹೊರೆ ತಗ್ಗಲಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.

ಈ ಐತಿಹಾಸಿಕ ತೀರ್ಮಾನಕ್ಕೆ ಸಾರಿಗೆ ಸಂಸ್ಥೆಗಳಾದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಗೆ ತಗಲುವ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಸಬ್ಸಿಡಿ ರೂಪದಲ್ಲಿ ಭರಿಸಲಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಹೊಸ ಸರ್ಕಾರದ ಈ ಮೊದಲ ಜನಪರ ನಿರ್ಧಾರಕ್ಕೆ ರಾಜ್ಯಾದ್ಯಂತ ವಿದ್ಯಾರ್ಥಿ ಸಂಘಟನೆಗಳು ಹಾಗೂ ಪೋಷಕರಿಂದ ಭಾರಿ ಮೆಚ್ಚುಗೆ ಮತ್ತು ಅಭಿನಂದನೆಗಳು ಹರಿದುಬರುತ್ತಿವೆ.

Share this Article
Leave a comment