ಚಾಮರಾಜನಗರ: ಜಿಲ್ಲೆಯಲ್ಲಿ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದ ಕಲಾವಿದರಿಗೆ ಆಗಸ್ಟ್ 6 ರಿಂದ ಪ್ರತಿ ದಿನ ಮಧ್ಯಾಹ್ನ 3 ಗಂಟೆಯಿಂದ ಗುರುತಿನ ಚೀಟಿಗಳನ್ನು ನಗರದ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ವಿತರಿಸಲಾಗುವುದು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕರು ಆಗಸ್ಟ್ 6 ರಂದು ಜಿಲ್ಲಾ ಕಚೇರಿಗೆ ಭೇಟಿ ನೀಡುತ್ತಿದ್ದು ಅಂದು ಮಧ್ಯಾಹ್ನ 3 ಗಂಟೆಗೆ ಸಾಂಕೇತಿಕವಾಗಿ ಕಲಾವಿದರ ಗುರುತಿನ ಚೀಟಿಯನ್ನು ವಿತರಿಸಲಾಗುತ್ತದೆ. ಕಲಾವಿದರು ಆಗಮಿಸಿ ಗುರುತಿನ ಚೀಟಿಯನ್ನು ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೂ.ಸಂಖ್ಯೆ 08226-222210 ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಎಸ್. ರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.