ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಮಣಿಕಂಠ ಜನತಾ ರಾಯಭಾರಿ
1 Min Read

ಗುಂಡ್ಲುಪೇಟೆ: ತಾಲೂಕಿನ ಬೇಗೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಹಸಿರು ಪರಿಸರ ನಿರ್ಮಾಣದ ಸಂದೇಶ ಸಾರಲಾಯಿತು. ಪರಿಸರವನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಶಿಕ್ಷಕರು ವಿದ್ಯಾರ್ಥಿಗಳಿಗೆ ತಿಳಿಸಿದರು. ಗಿಡಗಳನ್ನು ನೆಟ್ಟು ಬೆಳೆಸುವುದು ಮಾತ್ರವಲ್ಲದೆ ಅವುಗಳ ಸಂರಕ್ಷಣೆಯೂ ಅಗತ್ಯವೆಂದು ಕರೆ ನೀಡಲಾಯಿತು.ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಪ್ರತಿಜ್ಞೆ ಸ್ವೀಕರಿಸಿ, ಪ್ರಕೃತಿಯನ್ನು ಕಾಪಾಡುವ ಸಂಕಲ್ಪ ಮಾಡಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಕವಿತಾ ಎಸ್, ನಿಲಯಪಾಲಕರಾದ ಮಂಜುನಾಥ.ಹೆಚ್.ಎನ್, ಶಾಲಾ ಶಿಕ್ಷಕರಾದ ಮಹೇಂದ್ರ, ಭುವನೇಶ್ವರಿ, ಜ್ಯೋತಿ, ನಿರ್ಮಲ, ನಾಗಯ್ಯ,ಲೋಹಿತ್, ಕಿರಣ್ ರಾಜೇಶ್ ಹಾಗೂ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಕಾಳಜಿ ಮತ್ತು ಜವಾಬ್ದಾರಿಯ ಮನೋಭಾವ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿತು. ಹಸಿರು ಭವಿಷ್ಯ ನಿರ್ಮಾಣಕ್ಕೆ ಇಂತಹ ಕಾರ್ಯಕ್ರಮಗಳು ಪ್ರೇರಣೆಯಾಗಲಿವೆ

Share this Article
Leave a comment