ಚಾಮರಾಜನಗರ: ಅಮಚವಾಡಿ, ಹೊನ್ನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹುಲಿ ದಾಳಿ ಮಿತಿಮೀರಿದ್ದು, ಕುರಿ-ಮೇಕೆ ಹಾಗೂ ಜಾನುವಾರುಗಳನ್ನು ಬಲಿ ಪಡೆಯುತ್ತಿದೆ.
ತಾಲೂಕಿನ ಚನ್ನಪ್ಪನಪುರ ಗ್ರಾಮದ ನಿವಾಸಿ ಮಹದೇವಯ್ಯ ಎಂಬುವವರಿಗೆ ಸೇರಿದ 2 ಹಸುಗಳ ಮೇಲೆ ದಾಳಿ ನಡೆಸಿದ್ದು, ಹಸುಗಳು ಮೃತಪಟ್ಟಿದೆ. ಹುಲಿ ದಾಳಿಯ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹುಲಿ ಸೆರೆ ಹಿಡಿಯಲು ಮುಂದಾಗಿದ್ದಾರೆ.

ಅಮಚವಾಡಿ ಮತ್ತು ಹೊನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಹಾಗೂ ಹುಲಿ ಕಂಡುಬಂದಲ್ಲಿ ಕೂಡಲೇ ಚಾಮರಾಜನಗರ ಪ್ರಾದೇಶಿಕ ವಲಯದ ಸಿಬ್ಬಂದಿಗಳಿಗೆ ಮಾಹಿತಿ ನೀಡುವಂತೆ ಅರಣ್ಯ ಇಲಾಖೆ ತಿಳಿಸಿದೆ.