ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅನುಷ್ಠಾನ ಅಧಿಕಾರಿಯಾಗಿ (ಆರ್.ಸಿ.ಎಚ್.ಓ) ಅಧಿಕಾರಿ ಡಾ.ರೇಣುಕಾದೇವಿ ಅವರನ್ನು ನೇಮಕ ಮಾಡಲಾಗಿದೆ.
ಚಾಮರಾಜನಗರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ರಾಜ್ಯ ಉಪಾಧ್ಯಕ್ಷರು ಆಗಿರುವ ಡಾ.ರೇಣುಕಾದೇವಿ ಅವರು ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಜಿಲ್ಲಾ ಆರ್.ಸಿ.ಎಚ್.ಓ ಅಧಿಕಾರಿಯಾಗಿ ನೇಮಕ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಡಿ.ಎಸ್.ಪ್ರದೀಪ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.