ಜು.23ರಂದು ಸಾರ್ವಜನಿಕರ ಕುಂದು ಕೊರತೆ ಪರಿಹಾರಕ್ಕೆ ನೇರ ಫೋನ್ ಇನ್ ಕಾರ್ಯಕ್ರಮ

ಮಣಿಕಂಠ ಜನತಾ ರಾಯಭಾರಿ
0 Min Read

ಚಾಮರಾಜನಗರ: ಜಿಲ್ಲೆಯ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ನೇರ ಫೋನ್ ಇನ್ ಕಾರ್ಯಕ್ರಮವನ್ನು ಜು. 23ರಂದು ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಇತರೆ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.

ಸಾರ್ವಜನಿಕರು ಜುಲೈ 23ರಂದು ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆ ದೂರವಾಣಿ ಸಂಖ್ಯೆ 08226-223163 ಗೆ ಕರೆ ಮಾಡಿ ತಮ್ಮ ಕುಂದು ಕೊರತೆಗಳನ್ನು ತಿಳಿಸಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Share this Article
Leave a comment