ಡಾ.ಎಚ್.ಸಿ.ಮಹದೇವಪ್ಪ ಮತ್ತು ನರೇಂದ್ರಸ್ವಾಮಿ ಅವರಿಗೆ ಸಚಿವ ಸ್ಥಾನಕ್ಕೆ ಆಗ್ರಹ 

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಕಾಂಗ್ರೆಸ್ ಸರ್ಕಾರದಲ್ಲಿ ಡಾ.ಎಚ್.ಸಿ.ಮಹದೇವಪ್ಪ ಮತ್ತು ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಯುವ ಮುಖಂಡ ಪರಶಿವಮೂರ್ತಿ ಆಗ್ರಹಿಸಿದ್ದಾರೆ.

ಡಾ.ಎಚ್.ಸಿ.ಮಹದೇವಪ್ಫ ಅವರು ಸಮಾಜ ಕಲ್ಯಾಣ ಸಚಿವರಾಗಿ ಹಲವಾರು ಐತಿಹಾಸಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಶ್ರೀನಿವಾಸ್ ಪ್ರಸಾದ್ ಅವರ ನಂತರ ದಲಿತ ಸಮುದಾಯದ ಪ್ರಬಲ ಮುಖಂಡರಾಗಿರುವ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮುದಾಯಕ್ಕೆ ಶಕ್ತಿಯನ್ನು ತುಂಬಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೋರ್ವ ದಲಿತ ಶಾಸಕರಾಗಿರುವ ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಅವರಿಗೆ ಸಚಿವ ಸ್ಥಾನವನ್ನು ನೀಡುವ ಮೂಲಕ ದಲಿತ ಸಮುದಾಯಕ್ಕೆ ಮತ್ತಷ್ಟು ಶಕ್ತಿಯನ್ನು ತುಂಬಬೇಕು. ಈ ಇಬ್ಬರಿಗೂ ಸಚಿವ ಸ್ಥಾನವನ್ನು ನೀಡಿದರೇ ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟಲು ಸಹಕಾರಿಯಾಗಲಿದೆ ಎಂದು ಅವರು ಮನವಿ ಮಾಡಿದರು.

Share this Article
Leave a comment