ಡಾ.ಹೆಚ್.ಸಿ.ಮಹದೇವಪ್ಪ ಮನವೊಲಿಕೆಗೆ ಮುಂದಾದ ಕಾಂಗ್ರೆಸ್ ಸಚಿವರು

ಮಣಿಕಂಠ ಜನತಾ ರಾಯಭಾರಿ
1 Min Read

ಬೆಂಗಳೂರು: ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಡಾ..ಹೆಚ್.ಸಿ.ಮಹದೇವಪ್ಪ ಅವರ ಮನವೊಲಿಕೆಗೆ ಕಾಂಗ್ರೆಸ್ ಸಚಿವರು ಮುಂದಾಗಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಸಚಿವಾಕಾಂಕ್ಷಿಗಳನ್ನು ಮನವೊಲಿಸುವ ಜವಾಬ್ದಾರಿಯನ್ನು ಸಚಿವ ಚೆಲುವರಾಯಸ್ವಾಮಿ ಹಾಗೂ ಹೆಚ್.ಸಿ. ಬಾಲಕೃಷ್ಣ ಅವರಿಗೆ ನೀಡಿದ್ದಾರೆ ಎನ್ನಲಾಗಿದ್ದು, ಚೆಲುವರಾಯಸ್ವಾಮಿ ಅವರು ಶುಕ್ರವಾರ ಹೆಚ್.ಸಿ.ಮಹದೇವಪ್ಪ ಅವರ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸಚಿವ ಚೆಲುವರಾಯಸ್ವಾಮಿ ಅವರು ತಡರಾತ್ರಿ ಮಹದೇವಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಮಹದೇವಪ್ಪ ಅವರನ್ನು ಭೇಟಿ ಮಾಡಿದ ಚೆಲುವರಾಯಸ್ವಾಮಿ, ಸಚಿವ ಸ್ಥಾನಕ್ಕೆ ಸಂಬಂಧಿಸಿದ ಅಸಮಾಧಾನವನ್ನು ಶಮನಗೊಳಿಸುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಶಾಸಕರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ, ಪಕ್ಷದಲ್ಲಿ ಒಗ್ಗಟ್ಟು ಕಾಪಾಡುವ ನಿಟ್ಟಿನಲ್ಲಿ ಮನವೊಲಿಸುವ ಪ್ರಯತ್ನ ಮುಂದುವರಿದಿದೆ.

Share this Article
Leave a comment