ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಜಗತ್ತಿಗೆ ಮಾದರಿ 

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಮೈಸೂರು ಸಂಸ್ಥಾನದ ರಾಜರಾಗಿದ್ದ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತ ಜಗತ್ತಿಗೆ ಮಾದರಿಯಾಗಿದೆ ಎಂದು ಬಹುಜನ ಸಮಾಜ ಪಕ್ಷದ ಉಸ್ತುವಾರಿ ಹಾಗೂ ವಕೀಲರ ಸಂಘದ ಜಿಲ್ಲಾಧ್ಯಕ್ಷ ಪುಟ್ಟಸ್ವಾಮಿ ರಾಮಸಮುದ್ರ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಬಿಎಸ್ಪಿ ಜಿಲ್ಲಾ ಸಮಿತಿ ವತಿಯಿಂದ ಗುರುವಾರ ಆಯೋಜಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಜನ್ಮದಿನಾಚರಣೆ ಅಂಗವಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುಸ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತವನ್ನು ದೇಶದಲ್ಲಿ ಮಾದರಿ ಆಡಳಿತವಾಗಿತ್ತು. ಅವರ ಜನಪರವಾದ ಆಡಳಿತವನ್ನು ನೋಡಿ ಗಾಂಧಿ ಅವರು ರಾಜರ್ಷಿ ಎಂದು ಕರೆದಿದ್ದರು. ಶಿಕ್ಷಣ, ಸಾಹಿತ್ಯ, ಕೈಗಾರಿಕೆ, ಸಂಗೀತ, ಸಾಮಾಜಿಕ ಬದಲಾವಣೆ, ಕೃಷಿ ಹಾಗೂ ಇನ್ನಿತರೆ ಎಲ್ಲಾ ವಿಭಾಗದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಪ್ರಸ್ತುತವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ಎನ್.ನಾಗಯ್ಯ, ರಾಜ್ಯ ಕಾರ್ಯಕರಣಿ ಸಮಿತಿ ಸದಸ್ಯ ಬ್ಯಾಡಮೂಡ್ಲು ಬಸವಣ್ಣ, ಜಿಲ್ಲಾಧ್ಯಕ್ಷ ಬ.ಮ.ಕೃಷ್ಣಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಚವಾಡಿ ಪ್ರಕಾಶ್, ತಾಲ್ಲೂಕು ಅಧ್ಯಕ್ಷ ಚಂದ್ರಕಾಂತ್, ಜಿಲ್ಲಾ ಕಾರ್ಯದರ್ಶಿ ಅಭಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಹೆೊಸಳ್ಳಿ ಸಿದ್ದರಾಜು, ಟೌನ್ ಅಧ್ಯಕ್ಷ ರಂಗಸ್ವಾಮಿ ಹಾಗೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

Share this Article
Leave a comment