ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಹಾಗೂ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಆಯ್ಕೆಯಾದ ನೂತನ ವಿಧಾನಸಭಾ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು.
ಬೆಂಗಳೂರಿನ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಮೇಶ ಹುಲ್ಲಪ್ಪ ಮೇಟಿ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಅವರು ವಿಧಾನಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಈ ಸಂದರ್ಭದಲ್ಲಿ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.