ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ಸರಹದ್ದಿನ ವ್ಯಾಪ್ತಿಯಲ್ಲಿ ಆನೆ ದಾಳಿಯಿಂದ ಫಾರೆಸ್ಟ್ ವಾಚರ್ ಒಬ್ಬರು ಮೃತಪಟ್ಟಿದ್ದಾರೆ.
ಮಲೆಮಹದೇಶ್ವರ ಬೆಟ್ಟದ ಹುಲಿಗೂಡು ಗ್ರಾಮದ ಮಹದೇವಸ್ವಾಮಿ (48) ಮೃತ ದುರ್ದೈವಿ. ಇವರು ಮಲೆ ಮಹದೇಶ್ವರ ಅರಣ್ಯ ವ್ಯಾಪ್ತಿಯಲ್ಲಿ ಫಾರೆಸ್ಟ್ ವಾಚರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಪೊನ್ನಾಚಿ ಅರಣ್ಯ ವಲಯದ ಹುಣಸೇ ಬಯಲು ಅರಣ್ಯ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಆನೆ ದಾಳಿಗೆ ಒಳಗಾಗಿ ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಮಲೆ ಮಹದೇಶ್ವರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.