ಚಾಮರಾಜನಗರ, ಸೆ.17: ತಾಲ್ಲೂಕಿನ ಬಸವಾಪುರ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉಚಿತ ಕೇರಂ ಬೋರ್ಡ್ ವಿತರಿಸಲಾಯಿತು.
ಸರಗೂರು ತಾಲ್ಲೂಕಿನ ಕಿತ್ತೂರು ರವಿರಾಮೇಶ್ವರ ಟ್ರಸ್ಟ್ ವತಿಯಿಂದ ನೀಡಲಾದ ಕೇರಂ ಬೋರ್ಡ್ನ್ನು ಚಾಮರಾಜನಗರ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಿದ್ದಲಿಂಗಸ್ವಾಮಿ ಅವರು ಶಾಲೆಯ ಶಿಕ್ಷಕರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಿದ್ದಲಿಂಗ ಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಬೆಳೆಸುವುದರ ಜೊತೆಗೆ ಮನರಂಜನೆಯ ಮೂಲಕ ಏಕಾಗ್ರತೆ ಹಾಗೂ ಚಿಂತನಾ ಸಾಮರ್ಥ್ಯವನ್ನು ಹೆಚ್ಚಿಸಲು ಕೇರಂನಂತಹ ಒಳಾಂಗಣ ಕ್ರೀಡೆಗಳು ಸಹಕಾರಿಯಾಗಲಿವೆ ಎಂದು ತಿಳಿಸಲಾಯಿತು.
ನಂತರ ಹಿರಿಯ ಪತ್ರಕರ್ತ ಬಿಳಿಗಿರಿ ಶ್ರೀನಿವಾಸ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಓದಿನ ಜೊತೆಗೆ ಒಳಾಂಗಣ ಕ್ರೀಡೆಗಳಲ್ಲಿ ಹೆಚ್ಚು ತೊಡಗಿಸಿಕೊಂಡರೆ, ಶಾಲೆಗೆ ಹಾಗೂ ಗ್ರಾಮಕ್ಕೆ ಒಳ್ಳೆಯ ಹೆಸರು ಬರುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳಿಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಉತ್ತೇಜಿಸ ಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಸ್.ಎಂ.ನಂದೀಶ್, ಬಿಳಿಗಿರಿಶ್ರೀನಿವಾಸ್, ಚರಣ್ ಬಿಳಿಗಿರಿ, ಶಿಕ್ಷಕರಾದ ಮಲ್ಲಿಕಾರ್ಜುನ್ ಹಾಗೂ ಇತರರು ಉಪಸ್ಥಿತರಿದ್ದರು.