ಬಿ.ಆರ್.ಟಿಯಲ್ಲಿ ಹೆಣ್ಣು ಮರಿಯಾನೆ ಸಾವು 

ಮಣಿಕಂಠ ಜನತಾ ರಾಯಭಾರಿ
0 Min Read

ಚಾಮರಾಜನಗರ: ಪುಣಜನೂರು ವನ್ಯಜೀವಿ ವಲಯದ ವ್ಯಾಪ್ತಿಯಲ್ಲಿ ಹೆಣ್ಣು ಮರಿಯಾನೆಯೊಂದು ಮೃತಪಟ್ಟಿದೆ.

ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯದ ಬೇಡಗುಳಿ ಶಾಖೆಯ, ನೀರದುರ್ಗಿ ಗಸ್ತಿನ ಮರಳುಪಾಳದಲ್ಲಿನ ಅರಣ್ಯ ಪ್ರದೇಶದಲ್ಲಿ ಸುಮಾರು 2 ವರ್ಷ ವಯಸ್ಸಿನ ಒಂದು ಹೆಣ್ಣು ಮರಿಯಾನೆ ಮೃತಪಟ್ಟಿದೆ.

ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಮೇಲ್ನೋಟಕ್ಕೆ ಅನಾರೋಗ್ಯದಿಂದ ಮೃತಪಟ್ಟಿರುವುದು ಕಂಡುಬಂದಿದೆ. ಇಂದು ಆನೆಯ ಶವಪರೀಕ್ಷೆ ನಡೆಸಿ ಅಂಗಾಂಗಗಳ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಚಾಮರಾಜನಗರ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this Article
Leave a comment