ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

ಮಣಿಕಂಠ ಜನತಾ ರಾಯಭಾರಿ
0 Min Read

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ (85) ಶನಿವಾರ ಸಂಜೆ 4.30 ಗಂಟೆಗೆ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನಾಲ್ಕು ದಿನಗಳಿಂದ ಐಸಿಯುನಲ್ಲಿ ಚೆನ್ನಮ್ಮಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಸಂಜೆ 4.30ರ ಸುಮಾರಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಚೆನ್ನಮ್ಮ ಅವರು 1954 ಮೇ 25ರಂದು ಹೆಚ್.ಡಿ. ದೇವೇಗೌಡರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ ಅವರನ್ನು ಒಳಗೊಂಡಂತೆ 6 ಜನ ಮಕ್ಕಳಿದ್ದಾರೆ.

Share this Article
Leave a comment