ಚಾಮರಾಜನಗರ: ತಾಲೂಕಿನ ಆಲೂರು ಗ್ರಾಮದಲ್ಲಿ ಮೇ 16 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಗ್ರಾಮದ ಶ್ರೀ ಮಂಟೇಸ್ವಾಮಿ ದೇವಸ್ಥಾನದ ಮುಂಭಾಗ ಸಂಜೆ 3 ಗಂಟೆಗೆ ಪ್ರಾರಂಭವಾಗುವ ವೇದಿಕೆ ಕಾರ್ಯಕ್ರಮವನ್ನು ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಉದ್ಘಾಟಿಸುವರು. ಕೊಳ್ಳೇಗಾಲ ಚೇತವನ ಬುದ್ಧ ವಿಹಾರದ ಸುಗತಪಾಲ ಬಂತೇಜಿ ಅವರು ಸಾನಿಧ್ಯ ವಹಿಸುವರು. ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವರು. ಮೈಸೂರು ಮಹಾರಾಜ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಬಿಪಿನ್ ನಾಗರಾಜ್ ಅವರು ಮುಖ್ಯ ಭಾಷಣ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ವೇದಿಕೆ ಕಾರ್ಯಕ್ರಮದ ಬಳಿಕ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.