ಜೂ.22 ರಂದು ಭಗೀರಥ ಉಪ್ಪಾರ ಭವನ ಲೋಕಾರ್ಪಣೆ 

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಬಹುವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶ್ರೀ ಭಗೀರಥ ಉಪ್ಪಾರ ಸಮುದಾಯ ಭವನ ಜೂ.22 ರಂದು ಲೋಕಾರ್ಪಣೆಗೊಳ್ಳಲಿದೆ.

ನಗರದ ಶ್ರೀ ಮಹದೇಶ್ವರ ಬಡಾವಣೆ ಸಮೀಪದಲ್ಲಿ ನಿರ್ಮಾಣವಾಗಿರುವ ಶ್ರೀ ಭಗೀರಥ ಉಪ್ಪಾರ ಸಮುದಾಯ ಭವನದ ಕಾಮಗಾರಿ ಸಂಪೂರ್ಣವಾಗಿದ್ದು, ಜೂನ್ 22 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ರಾಜ್ಯ ಉಪ್ಪಾರ ಸಂಘದ ಅಧ್ಯಕ್ಷರೂ ಆಗಿರುವ ಸಿ.ಪುಟ್ಟರಂಗಶೆಟ್ಟಿ ಅವರು ಭವನ ನಿರ್ಮಾಣಕ್ಕೆ ಹೆಚ್ಚಿನ ರೀತಿಯಲ್ಲಿ ಶ್ರಮಿಸಿದ್ದು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗಿರುವ ಶ್ರೀ ಭಗೀರಥ ಉಪ್ಪಾರ ಸಮುದಾಯ ಭವನವನ್ನು ಬಹಳ ಆಕರ್ಷಕವಾಗಿ ನಿರ್ಮಾಣ ಮಾಡಿದ್ದು, ಉಪ್ಪಾರ ಸಮುದಾಯದವರ ಕನಸು ಕೊನೆಗೂ ನನಸಾಗಿದೆ.

Share this Article
Leave a comment