ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನನ್ನು ಬಲಿ ಪಡೆದಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಬೆಂಗಳೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ್ದ 6ರಕ್ಕೂ ಹೆಚ್ಚು ಮಹಿಳೆಯರು ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದು ಮೇ 10 ರಂದು ಬೆಳಗ್ಗೆ ಬೆಳಗ್ಗೆ ತೆರಳುತ್ತಿದ್ದರು. ಬೆಳಗ್ಗೆ 7:45ರ ವೇಳೆ ಹರ್ಷಿತ್ ಎಂಬ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಗಾಯಗೊಂಡು ಸ್ಥಳದಲ್ಲಿಯೇ ಬಾಲಕ ಮೃತಪಟ್ಟಿದ್ದ.
ಅರಣ್ಯ ಇಲಾಖೆಯ ಸಿಬ್ಬಂದಿಗಳ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯ ನಿವಾಸಿಗಳು ಹಾಗೂ ಹೋರಾಟಗಾರರು ಅರಣ್ಯ ಇಲಾಖೆಯ ಕಾರ್ಯ ವೈಖರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಚಿರತೆ ದಾಳಿಯಿಂದ ಬಾಲಕ ಮೃತಪಟ್ಟ ಹಿನ್ನೆಲೆ ಎಚ್ಚೆತ್ತ ಅರಣ್ಯ ಇಲಾಖೆ ಚಿರತೆಯನ್ನು ಸೆರೆ ಹಿಡಿಯಲು ಕ್ರಮ ವಹಿಸಿದ್ದರು. ಚಿರತೆ ಚಲನವಲವನ್ನು ಪತ್ತೆಹಚ್ಚಲು ನಾಲ್ಕು ಥರ್ಮಲ್ ಡ್ರೋಣ್ ಬಳಕೆ ಮಾಡಿದ್ದರು. ತಜ್ಞ ಪಶು ವೈದ್ಯಾಧಿಕಾರಿಗಳು ಸ್ಥಳದಲ್ಲಿ ಮೊಕ್ಕಂ ಹೂಡಿದ್ದರು.

ಅರಣ್ಯ ಇಲಾಖೆಯ ಸಿಬ್ಬಂದಿಗಳ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯ ನಿವಾಸಿಗಳು ಹಾಗೂ ಹೋರಾಟಗಾರರು ಅರಣ್ಯ ಇಲಾಖೆಯ ಕಾರ್ಯ ವೈಖರಿಯ ಬಗ್ಗೆ ಆಕ್ರೋಶ ಹೊರಹಾಕಿದ್ದರು.
ಚಿರತೆ ದಾಳಿಯಿಂದ ಬಾಲಕ ಮೃತಪಟ್ಟ ಹಿನ್ನೆಲೆ ಎಚ್ಚೆತ್ತ ಅರಣ್ಯ ಇಲಾಖೆ ಚಿರತೆಯನ್ನು ಸೆರೆ ಹಿಡಿಯಲು ಈಗಾಗಲೇ ಅಗತ್ಯ ಕ್ರಮ ವಹಿಸಿ, ಚಿರತೆ ಚಲನವಲವನ್ನು ಪತ್ತೆಹಚ್ಚಲು ನಾಲ್ಕು ಥರ್ಮಲ್ ಡೋನ್ ಮುಖಾಂತರ ಪತ್ತೆ ಹಚ್ಚಲು ಕ್ರಮವಹಿಸಿ ಸ್ಥಳದಲ್ಲಿಯೇ ತಜ್ಞ ಪಶು ವೈದ್ಯಾಧಿಕಾರಿಗಳು ಮೊಕ್ಕಂ ಹೂಡಿದ್ದರು.
15 ದಿನಗಳ ಬಳಿಕ ಸೆರೆ: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಇಂಡಿಗನತ್ತ ಸಮೀಪ ಚಿರತೆ ದಾಳಿ ನಡೆಸಿ ಬಾಲಕ ಮೃತಪಟ್ಟ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಇಂಡಿಗನತ್ತ ನಾಗಮಲೆ ಮಾರ್ಗವಾಗಿ ಚಿರತೆಯನ್ನು ಸೆರೆ ಹಿಡಿಯಲು ಮೂರು ಬೋನ್ ಇಟ್ಟು ಕಾರ್ಯಾಚರಣೆ ನಡೆಸಲಾಗಿತ್ತು. ಫೋನ್ ಗಳಲ್ಲಿ ನಾಯಿ ಮತ್ತು ಮೇಕೆಯನ್ನು ಬಿಟ್ಟು ಚಿರತೆ ಸೆರೆಗೆ ಸತತ ಪ್ರಯತ್ನ ನಡೆಸಲಾಗಿತ್ತು. ಅಂತೂ 15 ದಿನಗಳ ಬಳಿಕ ಅರಣ್ಯ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿದಿದ್ದಾರೆ.