ವಿದ್ಯಾರ್ಥಿಗಳ ಪರ ದನಿ; ಬಿಜೆಪಿ ಎಸ್ಟಿ ಮೋರ್ಚಾದ ಅಗರ ರಾಜು ಉಚ್ಛಾಟನೆ 

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟವನ್ನು ಬೆಂಬಲಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿದ್ದ, ಬಿಜೆಪಿ ಮುಖಂಡ ಅಗರ ರಾಜು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಮಾಜಿ ಸದಸ್ಯರಾದ ಅಗರ ರಾಜು ಅವರು, ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪರವಾಗಿ ಮಂಗಳವಾರ ಯಳಂದೂರು ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯ ಮಾಡಿದ್ದರು.

ಅದಲ್ಲದೇ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ಸಂಬಂಧ ಆಕ್ರೋಶ ವ್ಯಕ್ತಪಡಿಸಿ, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಒತ್ತಾಯಿಸಿದ್ದರು.

6 ವರ್ಷ ಉಚ್ಛಾಟನೆ: ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಮಾಜಿ ಸದಸ್ಯ ಅಗರ ರಾಜು ಅವರು ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತುವ ಮೂಲಕ ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಸುಮಾರು 6 ವರ್ಷಗಳ ಅಗರ ರಾಜು ಅವರನ್ನು ಉಚ್ಛಾಟನೆಗೊಳಿಸಿ ಬಿಜೆಪಿ ಜಿಲ್ಲಾ ಶಿಸ್ತು ಸಮಿತಿ ಅಧ್ಯಕ್ಷ ಮೂಡ್ನಾಕೂಡು ಪ್ರಕಾಶ್ ಅವರು ಆದೇಶ ಹೊರಡಿಸಿದ್ದಾರೆ.

 

Share this Article
Leave a comment